ಸ್ವದೇಶೀ ನಿರ್ಮಿತ ವಿಮಾನವಾಹಕ ನೌಕೆ ಐ.ಎನ್.ಎಸ್ ವಿಕ್ರಾಂತ್ ಲೋಕಾರ್ಪಣೆ ಮಾಡಿದ ಪ್ರಧಾನಿ ಮೋದಿ

ಕೊಚ್ಚಿ: ಕೊಚ್ಚಿಯಲ್ಲಿ ಸ್ವದೇಶೀ ನಿರ್ಮಿತ ವಿಮಾನವಾಹಕ ಐ.ಎನ್.ಎಸ್ ವಿಕ್ರಾಂತ್ ಅನ್ನು ಲೋಕಾರ್ಪಣೆ ಮಾಡಿ ಮಾತನಾಡಿದ ಪ್ರಧಾನಿ ಮೋದಿ, ಭಾರತದ ರಕ್ಷಣಾ ವಲಯವನ್ನು ಸ್ವಾವಲಂಬಿಯನ್ನಾಗಿ ಮಾಡಲು ಸರ್ಕಾರವು ಶ್ರಮಿಸುತ್ತಿದೆ ಎಂಬುದಕ್ಕೆ ಐಎನ್‌ಎಸ್ ವಿಕ್ರಾಂತ್ ಉದಾಹರಣೆಯಾಗಿದೆ ಎಂದರು.

ಐ.ಎನ್.ಎಸ್ ವಿಕ್ರಾಂತ್ ಕಾರ್ಯಾರಂಭವು ರಕ್ಷಣಾ ವಲಯದಲ್ಲಿ ಆತ್ಮನಿರ್ಭಾರತದತ್ತ ಮಹತ್ವದ ಹೆಜ್ಜೆಯನ್ನು ಸೂಚಿಸುತ್ತದೆ. ದೇಶವು ಈಗ ವಿಮಾನವಾಹಕ ನೌಕೆಯನ್ನು ವಿನ್ಯಾಸಗೊಳಿಸುವ ಮತ್ತು ನಿರ್ಮಿಸುವ ಸಾಮರ್ಥ್ಯವನ್ನು ಹೊಂದಿರುವ ಬೆರಳೆಣಿಕೆಯ ರಾಷ್ಟ್ರಗಳನ್ನು ಸೇರಿಕೊಂಡಿದೆ. ಪ್ರಧಾನಮಂತ್ರಿಯವರು ಈ ಸಂದರ್ಭದಲ್ಲಿ ಭಾರತೀಯ ನೌಕಾಪಡೆಯ ಹೊಸ ಧ್ವಜವನ್ನು ಅನಾವರಣಗೊಳಿಸಿದರು.

ಛತ್ರಪತಿ ಶಿವಾಜಿ ಮಹಾರಾಜರ ನೌಕಾ ಮುದ್ರೆಯನ್ನು ಭಾರತದ ಅತ್ಯಂತ ದೊಡ್ಡ ನೌಕಾಪಡೆಯ ಧ್ವಜದಲ್ಲಿ ಪ್ರತಿಫಲಿಸಲಾಗಿದೆ.

Image

ಪ್ರಧಾನಿ ಮಂಗಳೂರು ಭೇಟಿ:

ಮಧ್ಯಾಹ್ನ 1:30 ರ ಸುಮಾರಿಗೆ, ಕರ್ನಾಟಕದ ಮಂಗಳೂರಿನಲ್ಲಿ ಸುಮಾರು 3,800 ಕೋಟಿ ರೂಪಾಯಿಗಳ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆಯನ್ನು ಪ್ರಧಾನ ಮಂತ್ರಿಯವರು ನೆರವೇರಿಸಲಿದ್ದಾರೆ.

ಮಂಗಳೂರಿನ ಜನರ ಮಧ್ಯೆ ಇರಲು ಎದುರು ನೋಡುತ್ತಿದ್ದೇನೆ ಎಂದು ಮೋದಿ ಹೇಳಿದ್ದಾರೆ.

ಮಂಗಳೂರಿನಲ್ಲಿ ವಿವಿಧ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಯೋಜನೆಗಳ ಉದ್ಘಾಟನೆಗೆ ಇದೆ ಮೊದಲ ಬಾರಿ ಮಂಗಳೂರಿಗೆ ಪ್ರಧಾನಿ ಮೋದಿಯವರು ಭೇಟಿ ನೀಡುತ್ತಿದ್ದಾರೆ. ಇದಕ್ಕೂ ಮುನ್ನ ಚುನಾವಣಾ ಪ್ರಚಾರ ಹಾಗೂ ಲಕ್ಷದ್ವೀಪಕ್ಕೆ ಭೇಟಿ ನೀಡುವ ಸಂದರ್ಭದಲ್ಲಿ ಮಂಗಳೂರಿಗೆ ಭೇಟಿ ನೀಡಿದ್ದರು.

ಬಹಳ ದಿನಗಳ ನಂತರ ಸನ್ಮಾನ್ಯ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಕರ್ನಾಟಕದ ಕರಾವಳಿ ಭಾಗಕ್ಕೆ ಆಗಮಿಸುತ್ತಿದ್ದಾರೆ. ಕರಾವಳಿ ಪ್ರದೇಶದ ಸಮಗ್ರ ಅಭಿವೃದ್ಧಿಗಾಗಿ ಹಲವಾರು ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ. ಅವರಿಗೆ ಅಭೂತಪೂರ್ವ ಸ್ವಾಗತ ನೀಡಲು ಸಂಪೂರ್ಣ ಕರಾವಳಿ ಜನತೆ ಸನ್ನದ್ಧವಾಗಿದೆ ಎಂದು ಮುಖ್ಯಮಂತ್ರಿ ಬೊಮ್ಮಾಯಿ ಹೇಳಿದ್ದಾರೆ.