ನವದೆಹಲಿ: ಮಾರ್ನಿಂಗ್ ಕನ್ಸಲ್ಟ್ ಪೊಲಿಟಿಕಲ್ ಇಂಟೆಲಿಜೆನ್ಸ್ ಸರ್ವೆ ಪ್ರಕಾರ, ಭಾರತದ ಪ್ರಧಾನಿ ನರೇಂದ್ರ ಮೋದಿಯವರು 77% ಅನುಮೋದನೆಯ ರೇಟಿಂಗ್ ನೊಂದಿಗೆ ಜಾಗತಿಕವಾಗಿ ಅತ್ಯಂತ ಜನಪ್ರಿಯ ನಾಯಕ ಪಟ್ಟದಲ್ಲಿ ಮುಂದುವರೆದಿದ್ದಾರೆ. ಆಸ್ಟ್ರೇಲಿಯಾದ ಪ್ರಧಾನ ಮಂತ್ರಿ ಆಂಥೋನಿ ನಾರ್ಮನ್ ಅಲ್ಬನೀಸ್ 56% ನೊಂದಿಗೆ ಎರಡನೇ ಸ್ಥಾನದಲ್ಲಿದ್ದರೆ, 41% ರೇಟಿಂಗ್ ನೊಂದಿಗೆ ಅಮೇರಿಕಾ ಸಂಯುಕ್ತ ಸಂಸ್ಥಾನಗಳ ಅಧ್ಯಕ್ಷ ಜೋ ಬೈಡನ್ ಮೂರನೇ ಸ್ಥಾನದಲ್ಲಿದ್ದಾರೆ.
ಕೆನಡಾದ ಪ್ರಧಾನಿ ಜಸ್ಟಿನ್ ಟ್ರ್ಯೂಡೋ 38% , ಯುಕೆ ಪ್ರಧಾನಿ ರಿಷಿ ಸುನಕ್ 36% ಮತ್ತು ಜಪಾನ್ ಪ್ರಧಾನಿ ಫ್ಯೂಮಿಯೊ ಕಿಶಿಡಾ 23% ರೇಟಿಂಗ್ ನೊಂದಿಗೆ ಕ್ರಮವಾಗಿ ನಾಲ್ಕು, ಐದು ಮತ್ತು ಆರನೇ ಸ್ಥಾನದಲ್ಲಿದ್ದಾರೆ.