ಚೆನ್ನೈ: ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ತಮಿಳುನಾಡಿಗೆ ಆಗಮಿಸಲಿದ್ದು, ತಿರುಚಿರಾಪಳ್ಳಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನೂತನ ಟರ್ಮಿನಲ್ ಕಟ್ಟಡವನ್ನು ಉದ್ಘಾಟಿಸಲಿದ್ದಾರೆ.
1100 ಕೋಟಿಗೂ ಹೆಚ್ಚು ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗಿರುವ ಎರಡು ಹಂತದ ಹೊಸ ಅಂತಾರಾಷ್ಟ್ರೀಯ ಟರ್ಮಿನಲ್ ಕಟ್ಟಡವು ವಾರ್ಷಿಕ 44 ಲಕ್ಷಕ್ಕೂ ಹೆಚ್ಚು ಪ್ರಯಾಣಿಕರಿಗೆ ಸೇವೆ ಒದಗಿಸುವ ಸಾಮರ್ಥ್ಯವನ್ನು ಹೊಂದಿದೆ.
ಪ್ರಧಾನಿ ಮೋದಿಯವರು ತಿರುಚಿರಾಪಳ್ಳಿಯಿಂದ ದಕ್ಷಿಣ ಭಾರತ ಪ್ರವಾಸವನ್ನು ಆರಂಭಿಸಲಿದ್ದಾರೆ. ಪ್ರಧಾನಮಂತ್ರಿ ಮೋದಿ ಟರ್ಮಿನಲ್ ಅನ್ನು ಉದ್ಘಾಟಿಸಲಿದ್ದಾರೆ ಮತ್ತು ತಮಿಳುನಾಡಿನಲ್ಲಿ19,850 ಕೋಟಿ ರೂ ಗೂ ಹೆಚ್ಚು ಮೊತ್ತದ ಬಹು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.
ಅವರು ಜನವರಿ 2 ಮತ್ತು 3 ರಂದು ಎರಡು ದಿನಗಳ ಕಾಲ ತಮಿಳುನಾಡು, ಲಕ್ಷದ್ವೀಪ ಮತ್ತು ಕೇರಳಕ್ಕೆ ಭೇಟಿ ನೀಡಲಿದ್ದಾರೆ.