ಒಂಬತ್ತು ವಂದೇ ಭಾರತ್ ರೈಲುಗಳಿಗೆ ಚಾಲನೆ ನೀಡಲಿರುವ ಪ್ರಧಾನಿ ಮೋದಿ: ಹೈದರಾಬಾದ್-ಬೆಂಗಳೂರು ಮಾರ್ಗಕ್ಕೂ ರೈಲು

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಮಧ್ಯಾಹ್ನ 12:30ಕ್ಕೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಒಂಬತ್ತು ವಂದೇ ಭಾರತ್ ರೈಲುಗಳಿಗೆ ಚಾಲನೆ ನೀಡಲಿದ್ದಾರೆ. ಈ ರೈಲುಗಳ ಪ್ರಾರಂಭವು 11 ರಾಜ್ಯಗಳ ಧಾರ್ಮಿಕ ಮತ್ತು ಪ್ರವಾಸಿ ತಾಣಗಳನ್ನು ಸಂಪರ್ಕಿಸುತ್ತದೆ.

ಪ್ರಧಾನಮಂತ್ರಿ ಕಚೇರಿಯ ಪತ್ರಿಕಾ ಪ್ರಕಟಣೆಯ ಪ್ರಕಾರ, ರಾಜಸ್ಥಾನ, ತಮಿಳುನಾಡು, ತೆಲಂಗಾಣ, ಆಂಧ್ರಪ್ರದೇಶ, ಕರ್ನಾಟಕ, ಬಿಹಾರ, ಪಶ್ಚಿಮ ಬಂಗಾಳ, ಕೇರಳ, ಒಡಿಶಾ, ಜಾರ್ಖಂಡ್ ಮತ್ತು ಗುಜರಾತ್ ಇವು ವಂದೇ ಭಾರತ್ ರೈಲುಗಳ ಪ್ರಾರಂಭದಿಂದ ಪ್ರಯೋಜನ ಪಡೆಯುವ ರಾಜ್ಯಗಳು.

ಈ ವಂದೇ ಭಾರತ್ ರೈಲುಗಳ ಪರಿಚಯವು ದೇಶದಲ್ಲಿ ಹೊಸ ಗುಣಮಟ್ಟದ ರೈಲು ಸೇವೆಗೆ ನಾಂದಿ ಹಾಡಲಿದೆ ಮತ್ತು ಈ ರೈಲುಗಳು ವಿಶ್ವ ದರ್ಜೆಯ ಸೌಕರ್ಯಗಳು ಮತ್ತು ಕವಚ ತಂತ್ರಜ್ಞಾನ ಸೇರಿದಂತೆ ಸುಧಾರಿತ ಸುರಕ್ಷತಾ ವೈಶಿಷ್ಟ್ಯಗಳೊಂದಿಗೆ ಸುಸಜ್ಜಿತವಾಗಿರುತ್ತವೆ ಎಂದು ಪ್ರಕಟಣೆ ತಿಳಿಸಿದೆ.

ಇಂದು ಚಾಲನೆ ದೊರೆಯಲಿರುವ ವಂದೇ ಭಾರತ್ ರೈಲುಗಳು

  • ಉದಯಪುರ – ಜೈಪುರ ವಂದೇ ಭಾರತ್ ಎಕ್ಸ್‌ಪ್ರೆಸ್;
  • ತಿರುನೆಲ್ವೇಲಿ-ಮಧುರೈ- ಚೆನ್ನೈ ವಂದೇ ಭಾರತ್ ಎಕ್ಸ್‌ಪ್ರೆಸ್;
  • ಹೈದರಾಬಾದ್-ಬೆಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್;
  • ವಿಜಯವಾಡ – ಚೆನ್ನೈ (ರೇಣಿಗುಂಟಾ ಮೂಲಕ) ವಂದೇ ಭಾರತ್ ಎಕ್ಸ್‌ಪ್ರೆಸ್;
  • ಪಾಟ್ನಾ – ಹೌರಾ ವಂದೇ ಭಾರತ್ ಎಕ್ಸ್‌ಪ್ರೆಸ್;
  • ಕಾಸರಗೋಡು – ತಿರುವನಂತಪುರಂ ವಂದೇ ಭಾರತ್ ಎಕ್ಸ್‌ಪ್ರೆಸ್;
  • ರೂರ್ಕೆಲಾ – ಭುವನೇಶ್ವರ – ಪುರಿ ವಂದೇ ಭಾರತ್ ಎಕ್ಸ್‌ಪ್ರೆಸ್;
  • ರಾಂಚಿ – ಹೌರಾ ವಂದೇ ಭಾರತ್ ಎಕ್ಸ್‌ಪ್ರೆಸ್; ಮತ್ತು
  • ಜಾಮ್‌ನಗರ-ಅಹಮದಾಬಾದ್ ವಂದೇ ಭಾರತ್ ಎಕ್ಸ್‌ಪ್ರೆಸ್.