‘ಪಿಎಂ ನರೇಂದ್ರ ಮೋದಿ’ ಸಿನೆಮಾ ಬಿಡುಗಡೆಗೆ ಚುನಾವಣಾ ಆಯೋಗ ತಡೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಜೀವನಚರಿತ್ರೆಯನ್ನು ಆಧರಿಸಿದ ‘ಪಿಎಂ ನರೇಂದ್ರ ಮೋದಿ’ ಬಯೋಪಿಕ್‌ (ಸಿನೆಮಾ) ಬಿಡುಗಡೆಗೆ ಚುನಾವಣಾ ಆಯೋಗವು  ಬುಧವಾರ ತಡೆ ನೀಡಿದೆ.

ಹಾಗೆಯೇ ‘ನಮೋ ಟಿವಿ’ಯ ಪ್ರಸಾರಕ್ಕೂ ಲೋಕಸಭೆ ಚುನಾವಣೆ ಮುಗಿಯುವವರೆಗೆ ನಿರ್ಬಂಧ ಹೇರಲಾಗಿದೆ. ‘ನಮೋ ಟಿ.ವಿ’ಯಲ್ಲಿ ಪ್ರಧಾನಿ ಮೋದಿ ಅವರ ಕಾರ್ಯಕ್ರಮಗಳನ್ನು ಪ್ರಸಾರ ಮಾಡಲಾಗುತ್ತಿತ್ತು ಎಂದು ವಿರೋಧ ಪಕ್ಷಗಳು ಆರೋಪಿಸಿದ್ದವು.

‘ಪಿಎಂ ನರೇಂದ್ರ ಮೋದಿ’ ಬಯೋಪಿಕ್‌ ಏಪ್ರಿಲ್ 11ರಂದು ಬಿಡುಗಡೆಯಾಗಬೇಕಿತ್ತು. ಲೋಕಸಭೆಯ ಮೊದಲ ಹಂತದ ಮತದಾನವೂ ಅಂದೇ ನಡೆಯಲಿದೆ. ಆದರೆ ಅದಕ್ಕೂ ಒಂದು ದಿನ ಮೊದಲಷ್ಟೇ ಆಯೋಗವು ಈ ನಿರ್ಬಂಧ ಹೇರಿದೆ.