ಏ. 15 ಕ್ಕೆ ಪ್ರಧಾನಿ ಮೋದಿ ಕರ್ನಾಟಕ ಭೇಟಿ- ಹೀಗಿದೆ ಪ್ರೋಗ್ರಾಂ ಶೆಡ್ಯೂಲ್

ಮಂಡ್ಯ: ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಏಪ್ರಿಲ್ 15ರಂದು ಕರ್ನಾಟಕಕ್ಕೆ ಭೇಟಿ ನೀಡಲಿದ್ದು, ಮಂಡ್ಯ ಜಿಲ್ಲೆಯಲ್ಲಿ ಒಂದು ದಿನದ ಪ್ರವಾಸ ಕೈಗೊಳ್ಳಲಿದ್ದಾರೆ. ಪ್ರಧಾನಿ ಮೋದಿ ಅವರು ತಮ್ಮ ಪ್ರವಾಸದ ವೇಳೆ ಆದಿಚುಂಚನಗಿರಿ ಕ್ಷೇತ್ರಕ್ಕೆ ಭೇಟಿ ನೀಡಲಿದ್ದಾರೆ. ಅಲ್ಲದೆ, ಹೊಸದಾಗಿ ನಿರ್ಮಿಸಲಾದ ಶ್ರೀ ಗುರು ಭೈರವೈಕ್ಯ ಬಾಲಗಂಗಾಧರನಾಥ ಸ್ವಾಮೀಜಿ ಮಂದಿರವನ್ನು ಉದ್ಘಾಟಿಸಲಿದ್ದಾರೆ. ಈ ಕಾರ್ಯಕ್ರಮ ಧಾರ್ಮಿಕ ಹಾಗೂ ಸಾಮಾಜಿಕ ದೃಷ್ಟಿಯಿಂದ ಮಹತ್ವ ಪಡೆದಿದೆ.

ಪ್ರಧಾನಿ ಮೋದಿ ಅವರ ಕಾರ್ಯಕ್ರಮದ ವಿವರ

  • ಬೆಳಿಗ್ಗೆ 10:05ಕ್ಕೆ ದೆಹಲಿಯಿಂದ ವಿಮಾನದಲ್ಲಿ ಹೊರಟು ಬೆಂಗಳೂರಿನ HAL ವಿಮಾನ ನಿಲ್ದಾಣಕ್ಕೆ ಆಗಮನ
  • ಬೆಳಿಗ್ಗೆ 10:10ಕ್ಕೆ ಹೆಲಿಕಾಪ್ಟರ್ ಮೂಲಕ ಚುಂಚನಗಿರಿ ಹೆಲಿಪ್ಯಾಡ್‌ ಗೆ ಪ್ರಯಾಣ
  • ಬೆಳಿಗ್ಗೆ 10:50ಕ್ಕೆ ಚುಂಚನಗಿರಿ ಹೆಲಿಪ್ಯಾಡ್‌ ಗೆ ಆಗಮನ
  • ಅಲ್ಲಿಂದ ರಸ್ತೆ ಮಾರ್ಗವಾಗಿ ಆದಿಚುಂಚನಗಿರಿ ಕ್ಷೇತ್ರಕ್ಕೆ ಭೇಟಿ
  • ಬೆಳಿಗ್ಗೆ 11:00ಕ್ಕೆ ಶ್ರೀ ಗುರು ಭೈರವೈಕ್ಯ ಬಾಲಗಂಗಾಧರನಾಥ ಸ್ವಾಮೀಜಿ ಮಂದಿರ ಉದ್ಘಾಟನೆ

ಮುಂದಿನ ಪ್ರವಾಸ

ಮಂಡ್ಯ ಕಾರ್ಯಕ್ರಮಗಳನ್ನು ಪೂರ್ಣಗೊಳಿಸಿದ ಬಳಿಕ, ಪ್ರಧಾನಿ ಮೋದಿ ಅವರು ಬೆಂಗಳೂರಿನ HAL ವಿಮಾನ ನಿಲ್ದಾಣಕ್ಕೆ ಮರಳಿ, ಅಲ್ಲಿಂದ ಕೇರಳ ರಾಜ್ಯದತ್ತ ಪ್ರಯಾಣ ಬೆಳೆಸಲಿದ್ದಾರೆ.