ಸೆ.6: ಬೆಂಗಳೂರಿಗೆ ಪ್ರಧಾನಿ ಮೋದಿ: ಚಂದ್ರಯಾನ-2 ನೌಕೆಯ ವೀಕ್ಷಣೆ ಕಾರ್ಯಕ್ರಮದಲ್ಲಿ ಮೋದಿ

ಬೆಂಗಳೂರು: ಸೆ.6 ರಂದು ಬೆಂಗಳೂರಿಗೆ ಆಗಮಿಸಲಿರುವ ಪ್ರಧಾನಿ ನರೇಂದ್ರ ಮೋದಿ, ಸೆ.07ರಂದು ಪೀಣ್ಯ ಬಳಿ ಇರುವ ಭಾರತೀಯ ಬಾಹ್ಯಾಕಾಶ ಸಂಶೋಧನಾ ಕೇಂದ್ರ (ಇಸ್ರೋ)ದ ಚಂದ್ರಯಾನ-2 ನೌಕೆಯ ವೀಕ್ಷಣೆ ಕಾರ್ಯಕ್ರಮದಲ್ಲಿ ಮೋದಿ ಪಾಲ್ಗೊಳ್ಳಲಿದ್ದಾರೆ.

ಇದೇ ವೇಳೆ ಇಸ್ರೋ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಅವರೊಂದಿಗೆ ರಾಯಚೂರು ಜಿಲ್ಲೆ ಸಿಂಧನೂರು ನಗರದ ಡಾಫಡಿಲ್ಸ್‌ ಕಾನ್ಸೆಫ್ಟ್‌ ಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ಜಿ. ವೈಷ್ಣವಿ ನಾಗರಾಜ್ ಕೂಡ ಭಾಗವಹಿಸಲಿದ್ದಾರೆ. ಬಳಿಕ ಅಲ್ಲಿಂದ ನೇರವಾಗಿ ಪ್ರಧಾನಿ ಮೋದಿ ಮುಂಬೈಗೆ ತೆರಳಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.