ಇಂದು ರಾತ್ರಿ 8:30ಕ್ಕೆ ದೇಶವನ್ನು ಉದ್ದೇಶಿಸಿ ಪ್ರಧಾನಿ ಭಾಷಣ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಶನಿವಾರ ರಾತ್ರಿ 8:30ಕ್ಕೆ ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಅವರ ಕಚೇರಿ ಮೂಲಗಳು ತಿಳಿಸಿದೆ.

ಲೋಕಸಭೆಯಲ್ಲಿ ನಿನ್ನೆ ಮಹಿಳಾ ಮೀಸಲಾತಿ ಮಸೂದೆ ಮತ್ತು ಲೋಕಸಭಾ ಕ್ಷೇತ್ರಗಳ ಮರುವಿಂಗಡಣೆ ಮಸೂದೆಗೆ ಸೋಲಾದ ಬೆನ್ನಲ್ಲೇ ಮೋದಿ ಅವರು ಇಂದು ರಾತ್ರಿ ದೇಶ ಉದ್ದೇಶಿಸಿ ಮಾತನಾಡುತ್ತಿದ್ದು, ಪ್ರಧಾನಿ ನಡೆ ತೀವ್ರ ಕುತೂಹಲ ಕೆರಳಿಸಿದೆ. ಅವರು ಏನು ಮಾತನಾಡುತ್ತಾರೆ ಎಂಬ ಬಗ್ಗೆ ಇನ್ನೂ ಯಾವುದೇ ಖಚಿತ ಮಾಹಿತಿ ಇಲ್ಲ. ಕೇಂದ್ರ ಸರ್ಕಾರ, ವಿರೋಧ ಪಕ್ಷಗಳಿಂದ ತೀವ್ರ ಟೀಕೆಗಳ ನಡುವೆ ಮಹಿಳಾ ಮೀಸಲಾತಿ ಮಸೂದೆ ಸಂಸತ್ತಿನಲ್ಲಿ ವಿಫಲವಾದ ಒಂದು ದಿನದ ನಂತರ ಮೋದಿ ಭಾಷಣ ಮಾಡುತ್ತಿದ್ದು, ಹೆಚ್ಚು ಮಹತ್ವ ಪಡೆದುಕೊಂಡಿದೆ.