ಕಾರ್ಕಳ: ಸ್ವರಾಜ್ಯ ಮೈದಾನದಲ್ಲಿ ಪೊಲೀಸ್ ಬ್ಯಾಂಡ್; ಪಂಜಿನ ಕವಾಯತು

ಕಾರ್ಕಳ: ಬೆಂಗಳೂರು ಮತ್ತು ಮೈಸೂರಿನಂತಹ ನಗರಗಳಿಗೆ ಸೀಮಿತವಾಗಿದ್ದ ಪೊಲೀಸ್ ಬ್ಯಾಂಡ್ ಮತ್ತು ಪಂಜಿನ ಕವಾಯತು ಕಾರ್ಯಕ್ರಮವನ್ನು ಕಾರ್ಕಳ ಸ್ವರಾಜ್ಯ ಮೈದಾನದಲ್ಲಿ ನಡೆಸಲಾಗಿದ್ದು, ಇದು ಸ್ವರ್ಣ ಕಾರ್ಕಳಕ್ಕೆ ಇನ್ನಷ್ಟು ಗರಿಮೆ, ಹೊಸತನ ನೀಡುವ ಪ್ರಯತ್ನ ಮಾಡಲಾಗುತ್ತಿದೆ ಎಂದು ಇಂಧನ ಸಚಿವ ವಿ.ಸುನಿಲ್ ಕುಮಾರ್ ಹೇಳಿದರು.

ಪರಶುರಾಮ ಥೀಂ ಪಾರ್ಕ್ ಲೋಕಾರ್ಪಣೆ ನಿಮಿತ್ತ ಆಯೋಜಿಸಲಾಗಿದ್ದ ಪೊಲೀಸ್ ಬ್ಯಾಂಡ್ ಮತ್ತು ಪಂಜಿನ ಕವಾಯತು ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ, ಗೇರು ನಿಗಮದ ಅಧ್ಯಕ್ಷ ಬಿ.ಮಣಿರಾಜ್ ಶೆಟ್ಟಿ, ಕಾರ್ಕಳ ಪುರಸಭೆಯ ಅಧ್ಯಕ್ಷೆ ಸುಮಾ ಕೇಶವ, ಜಿಲ್ಲಾಧಿಕಾರಿ ಕೂರ್ಮಾ ರಾವ್, ಜಿ.ಪಂ ಸಿ.ಇ.ಒ ಪ್ರಸನ್ನ ಎಚ್, ಕುದುರೆಮುಖ ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಗಣಪತಿ ಕೆ, ಭುವನೇಂದ್ರ ಕಾಲೇಜು ಪ್ರಾಂಶುಪಾಲ ಮಂಜುನಾಥ್ ಕೋಟ್ಯಾನ್ ಮತ್ತಿತರರು ಉಪಸ್ಥಿತರಿದ್ದರು.

ಭುವನೇಂದ್ರ ಕಾಲೇಜಿನ ವಿದ್ಯಾರ್ಥಿಗಳು ಪಂಜಿನ ಕವಾಯತು ತರಬೇತಿ ಪಡೆದು ಕವಾಯತು ಪ್ರದರ್ಶಿಸಿದರು. ಎಸ್ಪಿ ಅಕ್ಷಯ್ ಮಚ್ಚೀಂದ್ರ ಸ್ವಾಗತಿಸಿದರು.