ಪೊಲೀಸ್ ಕಾನ್ಸ್‍ಟೇಬಲ್ ನೇಮಕಾತಿ: ಮೇ.16 ಜಿಲ್ಲಾ ಕ್ರೀಡಾಂಗಣದಲ್ಲಿ ಸಹಿಷ್ಣುತೆ, ದೇಹದಾಢ್ಯತೆ ಪರೀಕ್ಷೆ

ಉಡುಪಿ, ಮೇ 14: ಉಡುಪಿ ಜಿಲ್ಲೆಯ ನಾಗರೀಕ ಪೊಲೀಸ್ ಕಾನ್ಸ್‍ಟೇಬಲ್ ಹುದ್ದೆಯ ನೇಮಕಾತಿ ಸಂಬಂಧ ಅರ್ಜಿ ಸಲ್ಲಿಸಿರುವ ಅರ್ಹ ಅಭ್ಯರ್ಥಿಗಳಿಗೆ ಮೇ 16 ರಂದು ಬೆಳಗ್ಗೆ 6.30 ಕ್ಕೆ ಉಡುಪಿ ಅಜ್ಜರಕಾಡು ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಸಹಿಷ್ಣುತೆ ಮತ್ತು ದೇಹದಾಢ್ಯತೆ ಪರೀಕ್ಷೆಯನ್ನು ನಡೆಸಲಾಗುವುದು. ಲಿಖಿತ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಪ್ರವೇಶ ಪತ್ರ ಮತ್ತು ನಿಗದಿತ ಗುರುತಿನ ಚೀಟಿಯೊಂದಿಗೆ ಹಾಜರಾಗುವುದು. ಲಿಖಿತ ಪರೀಕ್ಷೆಯ ಪ್ರವೇಶ ಪತ್ರಕ್ಕಾಗಿ ಇಲಾಖೆಯ ಅಧಿಕೃತ ವೆಬ್‍ಸೈಟ್ www.ksp.gov.in ನ್ನು ಪರಿಶೀಲಿಸಬಹುದಾಗಿದೆ.

ಮೇ 16 ರಂದು ಕ್ರೀಡಾಂಗಣದಲ್ಲಿ ಪೊಲೀಸ್ ಕಾನ್ಸ್‍ಟೇಬಲ್ ಹುದ್ದೆಯ ಅಭ್ಯರ್ಥಿಗಳಿಗೆ ಸಹಿಷ್ಣುತೆ ಮತ್ತು ದೇಹದಾಢ್ಯತೆ ಪರೀಕ್ಷೆ ನಡೆಯಲಿರುವುದರಿಂದ ಬೆಳಗ್ಗೆ 5 ರಿಂದ ಕ್ರೀಡಾಂಗಣಕ್ಕೆ ಸಾರ್ವಜನಿಕರ ಪ್ರವೇಶ ನಿಷೇಧಿಸಲಾಗಿದ್ದು, ಸಾರ್ವಜನಿಕರು ಸಹಕರಿಸುವಂತೆ ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರ ಪ್ರಕಟಣೆ ತಿಳಿಸಿದೆ.