ಉಡುಪಿ: ಪ್ರಸಕ್ತ ಸಾಲಿನಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ ಪ್ರವೇಶಾತಿಗಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ –1, 2ಎ, 2ಬಿ, 3ಎ, 3ಬಿ, ಪ.ಜಾತಿ / ಪ.ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ, ಪಿ.ಯು.ಸಿ ಸಮಾನಾಂತರ ಡಿಪ್ಲೋಮಾ, ಐ.ಟಿ.ಐ ಕೋರ್ಸಿನಲ್ಲಿ ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ವೆಬ್ಸೈಟ್ https://shp.karnataka.gov.in/bcwd ನಲ್ಲಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಜೂನ್ 15 ಕೊನೆಯ ದಿನ.
ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ: 8050770004 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿಗಳ ಕಛೇರಿ ಪ್ರಕಟಣೆ ತಿಳಿಸಿದೆ.

















