ಬೆಂಗಳೂರು : ಬೆಂಗಳೂರ್ ನಗರದ ಆನೇಕಲ್ ತಾಲೂಕಿನ ಅತ್ತಿಬೆಲೆಯಲ್ಲಿ ಪಟಾಕಿ ಗೋದಾಮಿನಲ್ಲಿ ಅಗ್ನಿ ಅವಘಡ ಸಂಭವಿಸಿತ್ತು ಈ ಘಟನೆಯಲ್ಲಿ 14 ಜನ ಮೃತಪಟ್ಟಿದ್ದು ಮೂರು ಜನರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಈಗಾಗಲೇ ಗೋದಾಮಿನ ಮಾಲೀಕ ರಾಮಸ್ವಾಮಿ ರೆಡ್ಡಿ ಅವರ ಮಗ ನವೀನ್ ಸೇರಿದಂತೆ ಇತರರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಘಟನೆಯಲ್ಲಿ ಮೃತಪಟ್ಟ ಕುಟುಂಬಸ್ಥರಿಗೆ 5 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದರು ಅಲ್ಲದೆ ತಮಿಳುನಾಡು ಸರ್ಕಾರ ಕೂಡ ಮೃತಪಟ್ಟ ಕುಟುಂಬಸ್ಥರಿಗೆ 3 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ತಿಳಿಸಿದೆ. ಇಂದು ಘಟನಾ ಸ್ಥಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಆಗಮಿಸಿ, ಮಾಹಿತಿಯನ್ನು ಪಡೆದುಕೊಳ್ಳಲಿದ್ದಾರೆ.
ಆನೇಕಲ್ ತಾಲೂಕಿನ ಅತ್ತಿಬೆಲೆಯಲ್ಲಿ ಪಟಾಕಿ ಗೋದಾಮಿನಲ್ಲಿ ಅಗ್ನಿ ಅವಘಡ ಸಂಭವಿಸಿ ಸುಮಾರು 14 ಜನ ಮೃತಪಟ್ಟಿದ್ದರು. ಘಟನೆಯಲ್ಲಿ ಮೃತಪಟ್ಟವರ ದೇಹಗಳನ್ನು ಮರಣೋತ್ತರ ಪರೀಕ್ಷೆ ಎಂದು ಅತ್ತಿಬೆಲೆಯ ಆಕ್ಸ್ಫರ್ಡ್ ಆಸ್ಪತ್ರೆಗೆ ಕಳುಹಿಸಲಾಗಿತ್ತು.ಈ ವೇಳೆ ಅತ್ತಿಬೆಲೆಯ ಆಕ್ಸ್ಫರ್ಡ್ ವೈದ್ಯಕೀಯ ಕಾಲೇಜು ಆಸ್ಪತ್ರೆಯ ಆವರಣದಲ್ಲಿ ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತು. ಮೃತಪಟ್ಟವರಲ್ಲಿ ಬಹುತೇಕ ವಿದ್ಯಾರ್ಥಿಗಳಿದ್ದರು ಎಂದು ಹೇಳಲಾಗುತ್ತಿದೆ.