ಗ್ರಂಥಾಲಯ ಮೇಲ್ವಿಚಾರಕರ ಹುದ್ದೆ: ಅರ್ಜಿ ಆಹ್ವಾನ

ಉಡುಪಿ: ಜಿಲ್ಲೆಯ ಕುಂದಾಪುರ ತಾಲೂಕು ಪಂಚಾಯತ್ ವ್ಯಾಪ್ತಿಯ ಉಳ್ಳೂರು, ಗುಲ್ವಾಡಿ ಹಾಗೂ ಯಡಮೊಗೆ ಗ್ರಾಮ ಪಂಚಾಯತ್‌ಗಳ ಗ್ರಂಥಾಲಯಗಳಲ್ಲಿ ಖಾಲಿ ಇರುವ ತಲಾ 1 ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗಳನ್ನು ತಾತ್ಕಾಲಿಕ ನೆಲೆಯಲ್ಲಿ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಜೂನ್ 1 ಕೊನೆಯ ದಿನ. ಅರ್ಜಿ ನಮೂನೆ, ಮೀಸಲಾತಿ ವಿವರ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಂಬಂಧಿಸಿದ ಗ್ರಾಮ ಪಂಚಾಯತ್ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.