ಉಡುಪಿ: ಕರ್ನಾಟಕ ವಿಧಾನಸಭೆ ಸಾರ್ವತ್ರಿಕ ಚುನಾವಣೆ-2023 ಕ್ಕೆ ಸಂಬಂಧಿಸಿದಂತೆ ಅಗತ್ಯ ಸೇವೆಗಳ ಇಲಾಖೆ ಎಂದು ಗುರುತಿಸಲಾದ ಇಲಾಖೆಗಳ ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ ಕೇಂದ್ರ ಚುನಾವಣಾ ಆಯೋಗವು ಅಂಚೆ ಮತಪತ್ರದ ಮೂಲಕ ಮತದಾನ ಮಾಡಲು ಅವಕಾಶ ಕಲ್ಪಿಸಿದೆ.
ಅಗತ್ಯ ಸೇವೆಗಳ ಇಲಾಖೆಗಳಡಿ ಬರುವ ಗೈರು ಹಾಜರಿ ಮತದಾರರಿಗೆ ಮತದಾನ ಮಾಡಲು ಅನುಕೂಲವಾಗುವಂತೆ ಪೋಸ್ಟಲ್ ವೋಟಿಂಗ್ ಸೆಂಟರ್ ಅನ್ನು ಜಿಲ್ಲೆಯಲ್ಲಿ ಏಕ ಮಾದರಿಯಾಗಿ ಮೇ 2 ರಿಂದ 4 ರ ವರೆಗೆ ಬೆಳಗ್ಗೆ 9 ರಿಂದ ಸಂಜೆ 5 ರ ವರೆಗೆ ತೆರೆಯಲಾಗುವುದು. ಅಗತ್ಯ ಸೇವೆಗಳ ಇಲಾಖೆಗಳಡಿ ಬರುವ ಅಧಿಕಾರಿ ಹಾಗೂ ಸಿಬ್ಬಂದಿಗಳು ನಿಗದಿಪಡಿಸಿದ ದಿನಾಂಕಗಳಂದು ಮತದಾನ ಮಾಡಲು ತೆರಳಿದ
ದಿನದಂದು ವೇತನ ಸಹಿತ ರಜೆ ನೀಡಲಾಗುವುದು ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.