ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯ ವ್ಯಾಪ್ತಿಯ ಕಾಲೇಜುಗಳು ಹಾಗೂ ಸ್ನಾತಕೋತ್ತರ ಪದವಿ ತರಗತಿಗಳು ಡಿಸೆಂಬರ್ 1ರಿಂದ ಆರಂಭಗೊಳ್ಳಲಿದೆ ಎಂದು ಈ ಹಿಂದೆ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಪಿ.ಎಸ್.ಯಡಪಡಿತ್ತಾಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಿಂಡಿಕೇಟ್ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿತ್ತು.
ಆದರೆ ಶಿಕ್ಷಣ ಇಲಾಖೆ ರಾಜ್ಯದ ಎಲ್ಲಾ ವಿಶ್ವವಿದ್ಯಾನಿಲಯಗಳಲ್ಲಿ ನ.17ರಿಂದಲೇ ಕಾಲೇಜು ಆರಂಭಿಸಬೇಕು ಎಂದು ಆದೇಶ ನೀಡಿರುವ ಹಿನ್ನೆಲೆಯಲ್ಲಿ ನವೆಂಬರ್ 17ರಿಂದ ಶಾಲಾ ಕಾಲೇಜು ಆರಂಭ ಇದೀಗ ನಿಶ್ಚಿತವಾಗಿದೆ. ಸರ್ಕಾರದ ಕೋವಿಡ್ ನಿಯಮಾವಳಿಯಂತೆ ತರಗತಿಗಳು ಆರಂಭವಾಗಲಿವೆ.