ಬೆಂಗಳೂರು: ಸೆ. 28ರಂದು ರೈತ ಸಂಘಟನೆ ಸಹಿತ ವಿವಿಧ ಸಂಘಟನೆಗಳು ಕರ್ನಾಟಕ ಬಂದ್ ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಅಂದು ನಡೆಯಬೇಕಿದ್ದ ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆಯನ್ನು ಸೆ.29ಕ್ಕೆ ಮುಂದೂಡಲಾಗಿದೆ ಎಂದು ಶಿಕ್ಷಣ ಇಲಾಖೆ ತಿಳಿಸಿದೆ.
ಸೆ. 28ರಂದು ನಡೆಯಬೇಕಿದ್ದ ವಿಜ್ಞಾನ, ರಾಜ್ಯಶಾಸ್ತ್ರ, ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ ವಿಷಯಗಳ ಪರೀಕ್ಷೆಯನ್ನು ಮುಂದೂಡಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.