ಉಡುಪಿ: 33/11 ಕೆ.ವಿ ಶಿರ್ವ ಎಂ.ಯು.ಎಸ್.ಎಸ್ ನಲ್ಲಿ 5 ಎಂ.ವಿ.ಎ. ಎಸ್.ಎಫ್-6 ಬ್ರೇಕರ್ ಚಾರ್ಜಿಂಗ್ ಮತ್ತು ಕೆಪಾಸಿಟರ್ ಬ್ಯಾಂಕ್-1 ಮತ್ತು 2 ಚಾರ್ಜಿಂಗ್ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ, ಸದರಿ ಉಪಕೇಂದ್ರದಿಂದ ಹೊರಡುವ ಎಲ್ಲಾ 11 ಕೆ.ವಿ ಫೀಡರ್ಗಳಾದ ಉಳಿಯಾರಗೋಳಿ, ಬಂಟಕಲ್ಲು, ಮೂಡಬೆಟ್ಟು, ಪಾಂಗಳ, ಶಿರ್ವ, ಶಂಕರಪುರ, ಕುಂಜಾರುಗಿರಿ, ಸಾಲ್ಮರ, ಪಾಜೈ, ಕುರ್ಕಾಲು, ಇನ್ನಂಜೆ, ಪಡುಬೆಳ್ಳೆ, ಮಟ್ಟಾರು, ಪದವು, ಪಾಂಬೂರು, ಪಿಲಾರು ಖಾನ, ಪೆರ್ನಾಲು, ಕುತ್ಯಾರು, ಪುಂಚಲಕಾಡು, ಕಳತ್ತೂರು, ಚಂದ್ರನಗರ, ಮಲ್ಲಾರು, ಪೊಲಿಪು, ಕೊಪ್ಪಲಂಗಡಿ, ಪಣಿಯೂರು, ಕಾಪು ಬಡಾ ಗ್ರಾಮ(ಉಚ್ಚಿಲ), ಮೂಳೂರು, ಬೆಳಪು, ಅಬ್ಬೇಡಿ, ಪಾದೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಆಗಸ್ಟ್ 24 ರಂದು ಬೆಳಗ್ಗೆ 9 ರಿಂದ ಸಂಜೆ 5.30 ರ ವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ.