ನ. 18 ರಂದು ವಿವಿಧೆಡೆಗಳಲ್ಲಿ ವಿದ್ಯುತ್ ವ್ಯತ್ಯಯ

ಉಡುಪಿ: 110/33/11ಕೆವಿ ವಿದ್ಯುತ್ ಉಪಕೇಂದ್ರ ಹಿರಿಯಡ್ಕದಲ್ಲಿ 110 ಕೆ.ವಿ ಬಸ್ ಬಾರ್ ಮತ್ತು ಇದಕ್ಕೆ ಸಂಬಂಧಿಸಿದ ಉಪಕರಣಗಳ ತ್ರೈಮಾಸಿಕ ನಿರ್ವಹಣೆಯ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ 33 ಕೆವಿ ಹೆಬ್ರಿ ಫೀಡರ್‌ನಲ್ಲಿ ವಿದ್ಯುತ್ ಅಡಚಣೆಯಾಗುವುದರಿಂದ 33/11ಕೆವಿ ಹೆಬ್ರಿ ಉಪಕೇಂದ್ರದಿಂದ ಸರಬರಾಜು ಆಗುವ ಬೇಳೆಂಜೆ, ಕಳ್ತೂರು, ಸಂತೆಕಟ್ಟೆ, ಕರ್ಜೆ, ಮುಂಡಾಡಿಜೆಡ್ಡು, ಕುರ್ಪಾಡಿ, ಚಾರ, ಶಿವಪುರ, ಕನ್ಯಾನ, ನಾಡ್ಪಾಲು, ಸೋಮೇಶ್ವರ, ಸೀತಾನದಿ, ಮಡಾಮಕ್ಕಿ, ಕಾಸನಮಕ್ಕಿ, ಮುದ್ರಾಡಿ, ವರಂಗ, ಮುನಿಯಾಲು, ಕಬ್ಬಿನಾಲೆ, ಕೆರೆಬೆಟ್ಟು, ಹೊಸುರು, ಬಚ್ಚಾಪ್ಪು, ಹೆಬ್ರಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹಾಗೂ 110/33/11ಕೆವಿ ವಿದ್ಯುತ್ ಉಪಕೇಂದ್ರ ಹಿರಿಯಡ್ಕದಲ್ಲಿ 110 ಕೆವಿ ಹೆಗ್ಗುಂಜೆ ಮಾರ್ಗದ ಲೈನ್ ಸಿ.ಟಿ.ಯ ತುರ್ತುನಿರ್ವಹಣೆ ಮತ್ತು 110ಕೆ.ವಿ ಬಸ್ ಬಾರ್ ಮತ್ತು ಇದಕ್ಕೆ ಸಂಬಂಧಿಸಿದ ಉಪಕರಣಗಳ ತ್ರೈ ಮಾಸಿಕ ನಿರ್ವಹಣೆ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ 110/33/11 ಕೆವಿ ಹಿರಿಯಡ್ಕ ವಿದ್ಯುತ್ ಉಪಕೇಂದ್ರದಿಂದ ವಿದ್ಯುತ್ ಪಡೆಯುವ 110 ಕೆವಿ ಮಧುವನ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11ಕೆವಿ ಮಂದಾರ್ತಿ ಮತ್ತು ಬಾರ್ಕೂರು ಎಕ್ಸ್ ಪ್ರೆಸ್ ಫೀಡರಿನಲ್ಲಿ ಹಾಗೂ 33ಕೆವಿ ಪರ್ಕಳ, 33 ಕೆವಿ ಮಾಹೆ ಮತ್ತು 11ಕೆವಿ ಹಿರಿಯಡಕ, ಬಜೆ, ಪೆರ್ಡೂರು, ಮಾಣೈ, ಹಿರೇಬೆಟ್ಟು ಫೀಡರ್ ಮಾರ್ಗದಲ್ಲಿ ಹೊಸಾಳ, ಕಚ್ಚೂರು, ಹೇರಾಡಿ, ನಡೂರು, ಪಡುನೀಲಾವರ, ಬೆಣ್ಣೆಕುದ್ರು, ಶಿರೂರು, ನಂಚಾರು, ಹಿಲಿಯಾಣ, ಮಂದಾರ್ತಿ, ಹೆಬ್ಬಾಡಿ, ಪರ್ಕಳ ಸಿಟಿ, ಮಾಹೆ,
ಹಿರಿಯಡ್ಕ ಪೇಟೆ, ಬಜೆ, ಬಜೆ ವಾಟರ್ ಸಪ್ಲೈ, ಅಲಂಗಾರ್, ಜೋಗಿಬೆಟ್ಟು, ಹತ್ರ ಬೈಲು, ಪೆರ್ಡೂರು, ಮೇಲ್ಪೇಟೆ, ಕುಂತಳಕಟ್ಟೆ, ಎಳ್ಳಾರೆ, ಪಾಡಿಗಾರ, ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ನವೆಂಬರ್ 18 ರಂದು ಬೆಳಗ್ಗೆ 9 ರಿಂದ ಸಂಜೆ 5 ರ ವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ.