ಫೆ.21 ರಂದು ವಿದ್ಯುತ್ ವ್ಯತ್ಯಯ

ಉಡುಪಿ: 33/11 ಕೆ.ವಿ ಶಿರ್ವ ಎಂ.ಯು.ಎಸ್.ಎಸ್ ನಲ್ಲಿ ರೀ ಕಂಡಕ್ಟರಿಂಗ್ ಮತ್ತು ಟವರ್ ನಿರ್ಮಾಣ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಸದರಿ ಉಪಕೇಂದ್ರದಿಂದ ಹೊರಡುವ ಎಲ್ಲಾ 11 ಕೆ.ವಿ ಫೀಡರ್ ಮಾರ್ಗದಲ್ಲಿ, ಉಳಿಯಾರಗೋಳಿ, ಬಂಟಕಲ್ಲು, ಮೂಡಬೆಟ್ಟು, ಪಾಂಗಳ, ಶಿರ್ವ, ಶಂಕರಪುರ, ಕುಂಜಾರುಗಿರಿ, ಸಾಲ್ಮರ, ಪಾಜೈ, ಕುರ್ಕಾಲು, ಇನ್ನಂಜೆ, ಪಡುಬೆಳ್ಳೆ, ಮಟ್ಟಾರು, ಪದವು, ಪಾಂಬೂರು, ಪಿಲಾರುಖಾನ, ಪೆರ್ನಾಲು, ಕುತ್ಯಾರು, ಪುಂಚಲಕಾಡು, ಕಳತ್ತೂರು, ಚಂದ್ರನಗರ, ಮಲ್ಲಾರು, ಪೊಲಿಪು, ಕೊಪ್ಪಲಂಗಡಿ, ಪಣಿಯೂರು, ಕಾಪು ಬಡಾ, ಮೂಳೂರು, ಬೆಳಪು, ಅಬ್ಬೇಟ್ಟು, ಪಾದೂರು ಗ್ರಾಮ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಫೆಬ್ರವರಿ 21 ರಂದು ಬೆಳಗ್ಗೆ 9 ರಿಂದ ಸಂಜೆ 5 ರ ವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ.