ಉಡುಪಿ: ಕೋಟ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆ.ವಿ ಕೆದೂರು ಮಾರ್ಗದಲ್ಲಿ ಮಾರ್ಗ ನಿರ್ವಹಣೆ ಮತ್ತು ವಾಹಕ ಬದಲಾವಣೆ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಕೆದೂರು, ಉಳ್ತೂರು, ಬೇಳೂರು ಮತ್ತು ತೆಕ್ಕಟ್ಟೆ ಗ್ರಾಮಗಳ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮೇ 20 ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5 ರ ವರೆಗೆ ವಿದ್ಯುತ್ ನಿಲುಗಡೆ ಮಾಡಲಾಗುವುದು ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ.