ಪ್ರಧಾನಮಂತ್ರಿ ಆವಾಸ್ ಯೋಜನೆ: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಉಡುಪಿ: ಪ್ರಧಾನಮಂತ್ರಿ ಆವಾಸ್ ಯೋಜನೆ(ಗ್ರಾಮೀಣ) ಅಡಿಯ ಸಮೀಕ್ಷೆ-2018 ರ ಶಾಶ್ವತ ಪಟ್ಟಿಗೆ ಸೇರಿಸಲು ಉಡುಪಿ ತಾಲೂಕು ಪಂಚಾಯತ್ ವ್ಯಾಪ್ತಿಯ ಗ್ರಾಮ ಪಂಚಾಯತ್‌ಗಳಲ್ಲಿ ಬಾಕಿ ಉಳಿದಿರುವ ನಿವೇಶನ ರಹಿತರು ಹಾಗೂ ವಸತಿ ರಹಿತರ ಅರ್ಹತೆ ಹೊಂದಿರುವವರ ಸಮೀಕ್ಷೆ ಕಾರ್ಯದಿಂದ ಬಿಟ್ಟು ಹೋಗಿರುವ ಅರ್ಜಿದಾರರ ಆನ್‌ಲೈನ್ ನೋಂದಣಿ
ದಿನಾಂಕವನ್ನು ವಿಸ್ತರಿಸಲಾಗಿದ್ದು, ಅರ್ಹರು ಅಗತ್ಯ ದಾಖಲೆಗಳೊಂದಿಗೆ ಮೇ 29 ರ ಒಳಗಾಗಿ ತಮ್ಮ ವ್ಯಾಪ್ತಿಯ ಗ್ರಾಮ ಪಂಚಾಯತ್‌ಗಳಿಗೆ ಭೇಟಿ ನೀಡಿ ಹೆಸರು ನೋಂದಾಯಿಸಬಹುದಾಗಿದೆ ಎಂದು ಉಡುಪಿ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.