ನವದೆಹಲಿ: ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆಯಿಂದ ಉಂಟಾದ ಪ್ರತಿಭಟನೆಯ ಹಿನ್ನೆಲೆಯಲ್ಲಿ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ ನಂತರ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರಿಗೆ ಶಿಕ್ಷಣ ಸಚಿವಾಲಯದ ಹೆಚ್ಚುವರಿ ಜವಾಬ್ದಾರಿಯನ್ನು ನೀಡಲಾಗಿದೆ.
ಪ್ರಧಾನ್ ಅವರ ರಾಜೀನಾಮೆಯನ್ನು ಅಂಗೀಕರಿಸಿದ ನಂತರ, ರಾಷ್ಟ್ರಪತಿಗಳ ಕಚೇರಿ ಇಂದು ಸಂಜೆ ಪ್ರಕಟಣೆಯಲ್ಲಿ ಜೋಶಿ ಅವರ ನೇಮಕಾತಿಯನ್ನು ದೃಢಪಡಿಸಿದೆ. ಪ್ರಧಾನಿಗಳ ಶಿಫಾರಸಿನ ಮೇರೆಗೆ ಸಚಿವ ಪ್ರಲ್ಹಾದ್ ಜೋಷಿಯವರಿಗೆ ಶಿಕ್ಷಣ ಇಲಾಖೆಯ ಹೆಚ್ಚುವರಿ ಹೊಣೆ ನೀಡಿ ರಾಷ್ಟ್ರಪತಿಗಳು ಆದೇಶ ಹೊರಡಿಸಿದ್ದಾರೆ.
ಸದ್ಯ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಹಾಗೂ ನವೀಕರಿಸಬಹುದಾದ ಇಂಧನ ಖಾತೆಯನ್ನು ಜೋಶಿ ನಿರ್ವಹಣೆ ಮಾಡುತ್ತಿದ್ದಾರೆ.















