ಉಡುಪಿ: ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಅವರು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ಜೆಡಿಎಸ್ ಚಿಹ್ನೆಯಡಿ ಸ್ಪರ್ಧೆ ಮಾಡಲಿದ್ದು, ಜೆಡಿಎಸ್ ಬಿ ಫಾರಂ ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.
ಕಾಂಗ್ರೆಸ್ – ಜೆಡಿಎಸ್ ಸೀಟು ಹಂಚಿಕೆ ಒಪ್ಪಂದಂತೆ ಉಡುಪಿ – ಚಿಕ್ಕಮಗಳೂರು ಕ್ಷೇತ್ರ ಜೆಡಿಎಸ್ ಪಾಲಾಗಿತ್ತು. ಈ ಹಿನ್ನೆಲೆಯಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಯಾರು ಸ್ಪರ್ಧಿಸಲಿದ್ದಾರೆ ಎಂಬುವುದು ಭಾರೀ ಕುತೂಹಲ ಸೃಷ್ಟಿಸಿತ್ತು. ಆದರೆ ಇಂದು ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ಪ್ರಮೋದ್ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಚಿಹ್ನೆಯಡಿ ಸ್ಪರ್ಧಿಸುವುದು ಖಚಿತಗೊಳ್ಳುತ್ತಿದ್ದಂತೆ ಗೊಂದಲಗಳಿಗೆ ತೆರೆಬಿದ್ದಿದೆ.
ಜೆಡಿಎಸ್ ಹಾಗೂ ಕಾಂಗ್ರೆಸ್ ಮುಖಂಡರ, ಕಾರ್ಯಕರ್ತರ ವಿಶ್ವಾಸಗಳಿಸುತ್ತೇನೆ. ಅಲ್ಲದೆ, ಹಾಲಿ ಸಂಸದೆ ಶೋಭಾ ಕರಂದ್ಲಾಜೆ ಅವರ ವೈಫಲ್ಯ, ಕ್ಷೇತ್ರದ ಜನತೆಗೆ ಸಂಸದೆಯ ಮೇಲೆ ಇರುವ ಆಕ್ರೋಶದ ಲಾಭವನ್ನು ಪಡೆದು ಚುನಾವಣೆಯಲ್ಲಿ ಗೆಲುವು ಸಾಧಿಸುವ ಹುಮ್ಮಸ್ಸಿನಲ್ಲಿದ್ದಾರೆ.
ಜಿಲ್ಲೆಯ ಜನತೆ ಜೆಡಿಎಸ್ ಚಿಹ್ನೆಯಡಿ ಸ್ಪರ್ಧೆ ಮಾಡುವುದನ್ನು ಎಷ್ಟರ ಮಟ್ಟಿಗೆ ಒಪ್ಪುತ್ತಾರೆ ಯಕ್ಷಪ್ರಶ್ನೆಯಾಗಿದೆ.