ಕಾರ್ಕಳದಲ್ಲಿ ಮುತಾಲಿಕ್ ಸ್ಪರ್ಧೆ: ಬಿಜೆಪಿಯಿಂದ ಬೆಂಬಲದ ನಿರೀಕ್ಷೆ

ಕಾರ್ಕಳ: ಇಲ್ಲಿನ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಶ್ರೀರಾಮ ಸೇನೆಯ ಮುಖಂಡ ಪ್ರಮೋದ್ ಮುತಾಲಿಕ್, ಹಿಂದೂ ಸಮಾಜದ ಶ್ರೇಯಸ್ಸಿಗಾಗಿ ಬಿಜೆಪಿಯು ತನ್ನ ಅಭ್ಯರ್ಥಿಯನ್ನು ಕಣಕ್ಕೆ ಇಳಿಸದೆ ತನ್ನನ್ನು ಬೆಂಬಲಿಸಬೇಕು ಎಂದು ಹೇಳಿದ್ದಾರೆ.

ಪತ್ರಿಕಾಗೋಷ್ಠಿಯನ್ನುದ್ದೇಶಿ ಮಾತನಾಡಿದ ಶ್ರೀರಾಮ ಸೇನೆ ರಾಜ್ಯ ಪ್ರಧಾನ ಕಾರ್ಯದರ್ಶಿ ಆನಂದ ಶೆಟ್ಟಿ ಅಡ್ಯಾರ್, ಮುತಾಲಿಕ್ ರವರು 47 ವರ್ಷಗಳಿಂದ ಮನೆ ಮಠ ಕುಟುಂಬವನ್ನು ತ್ಯಜಿಸಿ ದೇಶ ಮತ್ತು ಧರ್ಮ ರಕ್ಷಣೆಗಾಗಿ ಹೋರಾಡುತ್ತಿದ್ದಾರೆ. ಈ ಹಿಂದೆ ರಾಜಕೀಯ ಅವಕಾಶಗಳಿದ್ದಾಗಲೂ ತಿರಸ್ಕರಿಸಿ ಸಂಘಟನೆಯಲ್ಲಿ ತೊಡಗಿಸಿಕೊಂಡು ದೇಶ ಸೇವೆ ಮಾಡಿದ್ದಾರೆ. ಮುತಾಲಿಕ್ ಅವರನ್ನು ಜನರು ಬೆಂಬಲಿಸಬೇಕು ಎಂದು ಅವರು ಹೇಳಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾಧ್ಯಕ್ಷ ಪ್ರದೀಪ್ ಮೂಡುಶೆಡ್ಡೆ, ಉಪಾಧ್ಯಕ್ಷ ಹರೀಶ್ ಬೊಕ್ಕಪಟ್ಣ, ಕಿಶೋರ್ ನೀರುಮಾರ್ಗ, ವೆಂಕಟೇಶ್ ಪಡಿಯಾರ್ ಮುಂತಾದವರು ಉಪಸ್ಥಿತರಿದ್ದರು.