ಉಡುಪಿ: ದ.ಕ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಷನ್ ಮಂಗಳೂರು ವತಿಯಿಂದ ಸದಸ್ಯರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಹಾಗೂ ನಗರ ಸಭೆ, ತಾಲೂಕು ಪಂಚಾಯತ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರ, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರು ಮತ್ತು ಉಪಾಧ್ಯಕ್ಷರಿಗೆ ಅಭಿನಂದನಾ ಸಮಾರಂಭ ಡಿಸೆಂಬರ್ 26ರ ಶನಿವಾರ ಮಧ್ಯಾಹ್ನ 3 ಗಂಟೆಗೆ ಮಲ್ಪೆ ಏಳೂರು ಮೊಗವೀರ ಸಭಾಭವನದಲ್ಲಿ ನಡೆಯಲಿದೆ.
ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ ಸಮಾರಂಭವನ್ನು ಉದ್ಘಾಟಿಸುವರು. ಮೀನು ಮಾರಾಟ ಫೆಡರೇಷನ್ ಅಧ್ಯಕ್ಷ ಯಶ್‍ಪಾಲ್ ಸುವರ್ಣ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ.
ಸಮಾರಂಭದಲ್ಲಿ ಮಖ್ಯ ಅತಿಥಿಗಳಾಗಿ ಉಡುಪಿ ನಗರಸಭೆಯ ಅಧ್ಯಕ್ಷೆ ಸುಮಿತ್ರಾ ನಾಯಕ್, ಉಪಾಧ್ಯಕ್ಷೆ ಲಕ್ಷ್ಮೀ ಮಂಜುನಾಥ್, ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ. ಕೋಟ್ಯಾನ್, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರಾಘವೇಂದ್ರ ಕಿಣಿ ಹಾಗೂ ಉಡುಪಿ ತಾಲೂಕು ಪಂಚಾಯತ್ ಅಧ್ಯಕ್ಷೆ ಸಂಧ್ಯಾ ಕಾಮತ್ ಮತ್ತು ಉಪಾಧ್ಯಕ್ಷ ಶರತ್ ಬೈಲಕರೆ, ಉಡುಪಿ ಜಿಲ್ಲಾ ಸೌಹಾರ್ದ ಸಹಕಾರಿ ಒಕ್ಕೂಟದ ಅಧ್ಯಕ್ಷ ಮಂಜುನಾಥ ಎಸ್. ಕೆ., ಮಲ್ಪೆ ಮೀನುಗಾರರ ಸಂಘದ ಅಧ್ಯಕ್ಷ ಕೃಷ್ಣ ಸುವರ್ಣ, ಮಲ್ಪೆ ಮೀನು ವ್ಯಾಪಾರಸ್ಥರ ಸಂಘದ ಅಧ್ಯಕ್ಷ ಸಾಧು ಸಾಲ್ಯಾನ್, ಉದ್ಯಮಿ ಆನಂದ ಪಿ. ಸುವರ್ಣ, ಮೊಗವೀರ ಯುವ ಸಂಘಟನೆಯ ಜಿಲ್ಲಾಧ್ಯಕ್ಷ ಶಿವರಾಮ ಕುಂದರ್ ಕೋಟ, ನಗರಸಭಾ ಸದಸ್ಯರಾದ ವಿಜಯ ಕೊಡವೂರು, ಸುಂದರ ಜೆ. ಕಲ್ಮಾಡಿ, ಎಡ್ಲಿನ್ ಕರ್ಕಡ ಭಾಗವಹಿಸುವರು ಎಂದು ಫೆಡರೇಷನ್ ಅಧ್ಯಕ್ಷ ಯಶ್‍ಪಾಲ್ ಸುವರ್ಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿದ್ಯಾರ್ಥಿಗಳ ದತ್ತು ಸ್ವೀಕಾರ:
ಮೀನುಗಾರಿಕೆ ವಿಷಯದಲ್ಲಿ ಉನ್ನತ ವಿದ್ಯಾಭ್ಯಾಸ ಮಾಡುವ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಫೆಡರೇಷನ್ ವತಿಯಿಂದ ವಿದ್ಯಾರ್ಥಿಗಳನ್ನು ದತ್ತು ಸ್ವೀಕರಿಸಲು ನಿರ್ಧರಿಸಿದ್ದು, ವಿದ್ಯಾರ್ಥಿಯ ವ್ಯಾಸಾಂಗದ ಸಂಪೂರ್ಣ ವೆಚ್ಚವನ್ನು ಫೆಡರೇಷನ್ ಮೂಲಕ ಭರಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.












