ಎಸ್.ವಿ.ಎಸ್ ವಿದ್ಯಾವರ್ಧಕ ಸಂಘ (ರಿ.) ಕಟಪಾಡಿ, ಮಾನ್ಯ ಕಲ್ಚರಲ್ & ಎಜ್ಯುಕೇಷನಲ್ ಫೌಂಡೇಶನ್ (ರಿ.) ಕಟಪಾಡಿ, ಇನ್ವೆಂಜರ್ ಫೌಂಡೇಶನ್ (ರಿ.) ಮಂಗಳೂರು ವತಿಯಿಂದ ೨೦೨೫-೨೬ನೇ ಸಾಲಿನಲ್ಲಿ ಶೈಕ್ಷಣಿಕ,ಕಲೆ,ಸಾಂಸ್ಕೃತಿಕ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ವಿತರಣೆ ಸಮಾರಂಭ ಮೇ.೨೭ರಂದು ಸಂಜೆ ೪.೦೦ ಗಂಟೆಗೆ ಎಸ್.ವಿ.ಎಸ್. ಹಿರಿಯ ಪ್ರಾಥಮಿಕ ಶಾಲಾ ಸಭಾಂಗಣದಲ್ಲಿ ನಡೆಯಲಿದೆ.
ಕಾಪು ಶಾಸಕ ಸುರೇಶ್ ಶೆಟ್ಟಿ ಗುರ್ಮೆ, ಉದ್ಯಮಿ ಯುವರಾಜ್ ಸಾಲ್ಯಾನ್ ಮಸ್ಕತ್, ಉದ್ಯಮಿ ಸುನೀಲ್ ಸಾಲ್ಯಾನ್ ಕಡೆಕಾರು, ಕಟಪಾಡಿ ಎಸ್.ವಿ.ಎಸ್.ವಿದ್ಯಾವರ್ಧಕ ಸಂಘದ ಸಂಚಾಲಕ ಕೆ.ಸತ್ಯೇಂದ್ರ ಪೈ, ಮಾನ್ಯ ಕಲ್ಚರಲ್ & ಎಜ್ಯುಕೇಷನಲ್ ಫೌಂಡೇಶನ್ ಅಧ್ಯಕ್ಷ ಶಿವಾನಂದ ಕೋಟ್ಯಾನ್ ಕಟಪಾಡಿ ಮುಖ್ಯಅತಿಥಿಗಳಾಗಿ ಭಾಗವಹಿಸಲಿರುವರು ಎಂದು ಪ್ರಕಟನೆ ತಿಳಿಸಿದೆ.

















