ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯ ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಪ್ರಮುಖ ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ ಎಂದು ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ತಿಳಿಸಿದೆ.
ಕಳೆದೆರಡು ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿ ಅಬ್ದುಲ್ ರಹಿಮಾನ್‌ನನ್ನು ಎನ್‌ಐಎ ವಶಕ್ಕೆ ಪಡೆದಿದೆ. ಕತಾರ್‌ನಿಂದ ಬಂದ ಆರೋಪಿಯನ್ನು ಕೇರಳದ ಕಣ್ಣೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎನ್‌ಐಎ ತಂಡ ವಶಕ್ಕೆ ಪಡೆದಿದೆ.
ಬೆಳ್ಳಾರೆಯಲ್ಲಿ 2022ರ ಜುಲೈನಲ್ಲಿ ಪ್ರವೀಣ್ ನೆಟ್ಟಾರು ಹತ್ಯೆ ನಡೆದಿತ್ತು. ಈ ಪ್ರಕರಣದ ತನಿಖೆಯನ್ನು 2022ರ ಆಗಸ್ಟ್‌ನಲ್ಲಿ ಎನ್‌ಐಎಗೆ ಹಸ್ತಾಂತರಿಸಲಾಗಿತ್ತು.












