ಚೆನ್ನೈ: ಖ್ಯಾತ ಗಾಯಕ ಎಸ್.ಬಿ. ಬಾಲಸುಬ್ರಹ್ಮಣ್ಯಂ ಅವರ ಶೀಘ್ರ ಚೇತರಿಕೆಗಾಗಿ ವಿಶ್ವದಾದ್ಯಂತ ಎಸ್ ಪಿಬಿ ಅಭಿಮಾನಿಗಳು ಹಾಗೂ ಸಂಗೀತ ಪ್ರಿಯರಿಂದ ಪ್ರಾರ್ಥನೆ.
ಸಂಗೀತ ಗಾಯನದ ಮೂಲಕ ಎಸ್ ಪಿಬಿ ಚೇತರಿಕೆಗೆ ಪ್ರಾರ್ಥನೆ ಸಲ್ಲಿಸುವ ಕಾರ್ಯಕ್ರಮಕ್ಕೆ ಸೂಪರ್ ಸ್ಟಾರ್ ರಜನಿಕಾಂತ್, ಕಮಲ್ ಹಾಸನ್, ಎ.ಆರ್. ರೆಹಮಾನ್ ಸಹಿತ ಭಾರತೀಯ ಸಂಗೀತ ದಿಗ್ಗಜರು, ಚಿತ್ರರಂಗದವರು ಸಾಥ್ ನೀಡಿದ್ದಾರೆ.
ಸದ್ಯ ಎಸ್ ಪಿಬಿ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಯಾವುದೇ ಬದಲಾವಣೆ ಆಗಿಲ್ಲ. ಅವರು ಚೆನ್ನೈನ ಎಂಜಿಎಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಶ್ವಾಸಕೋಶದ ಸಮಸ್ಯೆ ಹಿನ್ನೆಲೆಯಲ್ಲಿ ಚಿಕಿತ್ಸೆಗಾಗಿ ಎಸ್ ಪಿಬಿ ಅವರು ಆಸ್ಪತ್ರೆಗೆ ದಾಖಲಾಗಿದ್ದರು. ಇದರೊಂದಿಗೆ ಅವರಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿತ್ತು. ಕಳೆದ ಹದಿನೈದು ದಿನಗಳಿಗಿಂತಲೂ ಹೆಚ್ಚು ಸಮಯದಿಂದ ಅವರು ಚಿಕಿತ್ಸೆ ಪಡೆಯುತ್ತಿದ್ದು, ಆರೋಗ್ಯದಲ್ಲಿ ಯಾವುದೇ ಚೇತರಿಕೆ ಕಂಡುಬಂದಿಲ್ಲ.