ಉಡುಪಿ: ರಾಜ್ಯದ ಉಚ್ಛ ನ್ಯಾಯಾಲಯದ ಆದೇಶದಂತೆ, ಜಿಲ್ಲೆಯಲ್ಲಿರುವ ಖಾಸಗಿ ಪದವಿ ಪೂರ್ವ ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ದಾಖಲಾತಿಗೆ ಸಂಬಂಧಿಸಿದಂತೆ, ಆಯಾ ಕಾಲೇಜುಗಳು ಅಸ್ತಿತ್ವದಲ್ಲಿರುತ್ತದೆಯೇ ಅಥವಾ ಮಾನ್ಯತೆ ಪಡೆದಿದೆಯೇ ಎಂಬುದನ್ನು ವಿದ್ಯಾರ್ಥಿಗಳು ಹಾಗೂ ಪೋಷಕರು ಖಚಿತಪಡಿಸಿಕೊಂಡ ನಂತರವೇ ಪದವಿಪೂರ್ವ ತರಗತಿಗಳಿಗೆ ದಾಖಲಾಗುವಂತೆ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.