ಉಡುಪಿ: ಉಡುಪಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಕಾಂಗ್ರೆಸ್ ಭವನದಲ್ಲಿ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಚರ್ಚಿಸಬೇಕಾದ ವಿಷಯಗಳ ಬಗ್ಗೆ ಪೂರ್ವಭಾವಿ ಸಭೆಯನ್ನು ನಡೆಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರು ಅವರು ಮಾತನಾಡಿ ಮುಂಬರುವ ದಿನಗಳಲ್ಲಿ ಜನಸ್ಪಂದನ ಕಾರ್ಯಕ್ರಮಗಳು ಮತ್ತು ಸದಸ್ಯತ್ವ ನೋಂದಣಿ ಪ್ರಗತಿ ಪರಿಶೀಲನೆಯ ಬಗ್ಗೆ ವಿವರಣೆ ನೀಡಿದರು.
ಸಭೆಯಲ್ಲಿ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರಾದ ಪ್ರಖ್ಯಾತ್ ಶೆಟ್ಟಿ, ವಕ್ತಾರ ಭಾಸ್ಕರ್ ರಾವ್ ಕಿದಿಯೂರು, ಪ್ರಧಾನ ಕಾರ್ಯದರ್ಶಿಗಳಾದ ಕೆ. ಅಣ್ಣಯ್ಯ ಸೇರಿಗಾರ್, ಬಿ. ಕುಶಲ್ ಶೆಟ್ಟಿ, ಯತೀಶ್ ಕರ್ಕೇರಾ, ಕಾರ್ಯದರ್ಶಿಗಳಾದ ಬಾಲಕೃಷ್ಣ ಪೂಜಾರಿ, ಕೀರ್ತಿ ಶೆಟ್ಟಿ, ಸದಸ್ಯರಾದ ಉಪೇಂದ್ರ ಮೆಂಡನ್ ಉಪಸ್ಥಿತರಿದ್ದರು.












