ಉಡುಪಿ: ಜ.22 ಆದಿತ್ಯವಾರದಂದು ಬೆಳಿಗ್ಗೆ 10.00 ಗಂಟಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಡಿ ಕೆ ಶಿವಕುಮಾರ್, ಮಾಜಿ ಮುಖ್ಯಮಂತ್ರಿಗಳು, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ರಾಷ್ಟ್ರ ಮತ್ತು ರಾಜ್ಯಮಟ್ಟದ ನಾಯಕರ ಉಪಸ್ಥಿತಿಯಲ್ಲಿ ರಾಜ್ಯ ಬಿಜೆಪಿ ಸರ್ಕಾರದ ವೈಫಲ್ಯದ ವಿರುದ್ಧ ಉಡುಪಿಯ ಕ್ರಿಶ್ಚಿಯನ್ ಪದವಿಪೂರ್ವ ಕಾಲೇಜಿನ ಮೈದಾನದಲ್ಲಿ “ಪ್ರಜಾಧ್ವನಿ ಯಾತ್ರೆ” ಬೃಹತ್ ಸಮಾವೇಶವು ನಡೆಯಲಿದ್ದು, ಈ ಬೃಹತ್ ಸಮಾವೇಶದ ರೂಪುರೇಷೆಯ ಬಗ್ಗೆ ಮಾಹಿತಿ ನೀಡಲು ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ನೇತೃತ್ವದಲ್ಲಿ ಪೂರ್ವಭಾವಿ ಸಭೆಯನ್ನು ಜ.14 ಶನಿವಾರದಂದು ಸಂಜೆ 03.00 ಗಂಟೆಗೆ ಬ್ರಹ್ಮಗಿರಿಯ ಕಾಂಗ್ರೆಸ್ ಭವನದಲ್ಲಿ ಕರೆಯಲಾಗಿದೆ.
ಈ ಪೂರ್ವಭಾವಿ ಸಭೆಯಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಮಾಜಿ ಸಚಿವರು, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಉಪಾಧ್ಯಕ್ಷ ವಿನಯ್ ಕುಮಾರ್ ಸೊರಕೆ, ವಿಧಾನಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ, ಉಡುಪಿ ಜಿಲ್ಲಾ ಉಸ್ತುವಾರಿಗಳು, ಮಾಜಿ ಸಚಿವ ಅಭಯಚಂದ್ರ ಜೈನ್, ವಿಧಾನ ಪರಿಷತ್ ಮಾಜಿ ಸಭಾಪತಿ ಪ್ರತಾಪಚಂದ್ರ ಶೆಟ್ಟಿ, ಉಡುಪಿ ವಿಧಾನಸಭಾ ಕ್ಷೇತ್ರದ ಉಸ್ತುವಾರಿಗಳು, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ, ಮಾಜಿ ಶಾಸಕರಾದ ಗೋಪಾಲ ಪೂಜಾರಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ ಎ ಗಫೂರ್, ವಿಧಾನಸಭಾ ಕ್ಷೇತ್ರದ ಚುನಾವಣೆಗೆ ಅರ್ಜಿ ಸಲ್ಲಿಸಿದ ಆಕಾಂಕ್ಷಿಗಳು ಹಾಗೂ ಪಕ್ಷದ ಎಲ್ಲಾ ಹಿರಿಯ ನಾಯಕರು ಭಾಗವಹಿಸುತ್ತಿದ್ದಾರೆ. ಕಾರ್ಯಕರ್ತರು ಈ ಸಭೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ತಮ್ಮ ಅಭಿಪ್ರಾಯ ತಿಳಿಸಿ ಸಲಹೆ ಸೂಚನೆಗಳನ್ನು ನೀಡಬೇಕೆಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ರಮೇಶ್ ಕಾಂಚನ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.