ಸಂಶಯಾಸ್ಪದ ವ್ಯಕ್ತಿಗಳನ್ನು ಉಗ್ರರೆಂದು ಘೋಷಿಸುವ ಕಾನೂನಿಗೆ ರಾಷ್ಟ್ರಪತಿ ಅಂಕಿತ

ನವದೆಹಲಿ: ಸಂಶಯಾಸ್ಪದ ವ್ಯಕ್ತಿಗಳನ್ನು ಉಗ್ರರೆಂದು ಘೋಷಿಸಿ, ಆ ವ್ಯಕ್ತಿಗಳ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಲು ಅವಕಾಶ ಕಲ್ಪಿಸುವ ಕೇಂದ್ರ ಸರ್ಕಾರದ ಮಹತ್ವದ ಕಾನೂನು ಯುಎಪಿಎ ಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಒಪ್ಪಿಗೆ ಸೂಚಿಸಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ತಿದ್ದುಪಡಿ ಕಾಯ್ದೆ, 2019ಗೆ ರಾಷ್ಟ್ರಪತಿ  ಒಪ್ಪಿಗೆ ಸೂಚಿಸಿದ್ದು ವ್ಯಕ್ತಿಗಳನ್ನು ಭಯೋತ್ಪಾದಕರು ಎಂದು ಘೋಷಿಸಿದ ನಂತರ ಅವರ ಮೇಲೆ ಪ್ರಯಾಣ ನಿಷೇಧ ಹೇರಲು ಸಹ ಈ ಕಾನೂನಿನಡಿ ಅವಕಾಶವಿದೆ.