ಪ್ರಾಥಮಿಕ ಶಾಲಾ ಶಿಕ್ಷಕರು ನೆನಪಿನಲ್ಲಿ ಉಳಿಯುವ ಅತ್ಯಮೂಲ್ಯ ವ್ಯಕ್ತಿಗಳು: ಡಾ. ಉದಯ್ ಕುಮಾರ್ ಶೆಟ್ಟಿ

ಕಾರ್ಕಳ: ಶಿಕ್ಷಣ ಕೇವಲ ಜ್ಞಾನ ನೀಡುವ ಉದ್ದೇಶವನ್ನು ಹೊಂದಿರದೆ ವಿದ್ಯಾರ್ಥಿಗಳಲ್ಲಿ ಮೌಲ್ಯವರ್ಧನೆ ಮಾಡುವ ಗುರಿಯನ್ನೂ ಹೊಂದಿದೆ. ಈ ಗುರಿಯನ್ನು ಸಾಕಾರಗೊಳಿಸಲು ಇಂತಹ ಕಾರ್ಯಕ್ರಮಗಳು ಪೂರಕವಾಗಿವೆ. ಪ್ರಾಥಮಿಕ ಶಾಲಾ ಶಿಕ್ಷಕರು ನಮ್ಮ ಮನದಾಳದಲ್ಲಿ ಸದಾ ಕಾಲ ನೆಲೆಯೂರುವ ಅತ್ಯಮೂಲ್ಯ ವ್ಯಕ್ತಿಗಳು. ಈ ಅಪೂರ್ವ ಕಾರ್ಯಕ್ರಮದಲ್ಲಿ ಭಾಗಿಯಾದ ಸಂತೋಷ ನನಗಿದೆ ಎಂದು ಉಡುಪಿ ನಗರಸಭೆಯ ಪೌರಾಯುಕ್ತ ಡಾ. ಉದಯ್ ಕುಮಾರ್ ಶೆಟ್ಟಿ ಅಭಿಪ್ರಾಯ ವ್ಯಕ್ತಪಡಿಸಿದರು.

ಅವರು ಉಡುಪಿ ಜ್ಞಾನಸುಧಾ ಪದವಿಪೂರ್ವ ಕಾಲೇಜಿನಲ್ಲಿ ನಡೆದ ಶಿಕ್ಷಕರ ದಿನಾಚರಣೆಯ ಕಾರ್ಯಕ್ರಮದಲ್ಲಿ ನಿವೃತ್ತ ಶಿಕ್ಷಕರನ್ನು ಗೌರವಿಸಿ ಮಾತನಾಡಿದರು.

ಈ ಸಂದರ್ಭದಲ್ಲಿ ಕಡಿಯಾಳಿ ಹಿರಿಯ ಪ್ರಾಥಮಿಕ ಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯ ಪಿ.ಕೆ.ಸದಾನಂದ ಶರ್ಮ ಹಾಗೂ ನಿವೃತ್ತ ಶಿಕ್ಷಕಿಯರಾದ ಶ್ರೀಮತಿ ಮಹಾಲಕ್ಷ್ಮಿ ಮತ್ತು ಶ್ರೀಮತಿ ಕಮಲಾಕ್ಷಿ ಎನ್ ಉಪಾಧ್ಯ ಇವರನ್ನು ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ಅಜೆಕಾರು ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟಿನ ಅಧ್ಯಕ್ಷ ಡಾ. ಸುಧಾಕರ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು.

ಟ್ರಸ್ಟಿ ವಿದ್ಯಾವತಿ ಎಸ್ ಶೆಟ್ಟಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಉಡುಪಿ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಗಣೇಶ್ ಸ್ವಾಗತಿಸಿ, ಹಿಂದಿ ಉಪನ್ಯಾಸಕ ಶಶಿಧರ್ ಯು ಕಾರ್ಯಕ್ರಮ ನಿರೂಪಿಸಿದರು. ಉಪಪ್ರಾಂಶುಪಾಲ ಸಂತೋಷ್ ವಂದಿಸಿದರು.