ಮಕ್ಕಳೇ ಶಾಲೆ ಆರಂಭವಾಗುತ್ತಿದೆ..ಹೋಗಲು ರೆಡಿಯಾಗಿ..!

ಉಡುಪಿ: ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳನ್ನು ಜುಲೈ 1ರಿಂದ ಆರಂಭಿಸುವ ಕುರಿತಂತೆ ರಾಜ್ಯ ಸರ್ಕಾರ ಜೂನ್ 12ರಂದು ಸೂಕ್ತ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ಸಾಮಾಜಿಕ ಅಂತರ ಕಾಯ್ದುಕೊಳ್ಳುವುದರ ಜತೆಗೆ ಎಲ್ಲ ಸುರಕ್ಷಿತ ಕ್ರಮಗಳನ್ನು ಕೈಗೊಂಡು ಜುಲೈ 1 ರಿಂದ ಸರ್ಕಾರಿ ಹಾಗೂ ಅನುದಾನಿತ ಶಾಲಾ ಕಾಲೇಜುಗಳನ್ನು ಆರಂಭಿಸುವ ಬಗ್ಗೆ ಸರ್ಕಾರ ಚಿಂತನೆ ನಡೆಸಿದೆ ಎನ್ನಲಾಗಿದೆ.
ಈಗಾಗಲೇ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಶಾಲೆಗಳನ್ನು ಪುನರಾರಂಭಿಸುವ ಕುರಿತಂತೆ ಶಾಲಾ ಎಸ್ ಡಿಎಂ ಸದಸ್ಯರು ಹಾಗೂ ಮಕ್ಕಳ ಪೋಷಕರಿಂದ ಅಭಿಪ್ರಾಯ ಸಂಗ್ರಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಆ ವರದಿ ಜೂನ್ 12ರೊಳಗೆ ಕೈ ಸೇರಲಿದೆ. ಅಲ್ಲದೆ, ಕೇಂದ್ರ ಸರ್ಕಾರ ಐದನೇ ಹಂತದ ಲಾಕ್ ಡೌನ್ ನಲ್ಲಿ ಬಹುತೇಕ ನಿಯಮಗಳನ್ನು ಸಡಿಲಿಕೆ ಮಾಡಿರುವುದರಿಂದ ಜುಲೈ 1 ರಿಂದ ಶಾಲೆಗಳನ್ನು ಆರಂಭಿಸುವ ಬಗ್ಗೆ ಜೂನ್ 12 ರಂದು ಸ್ಪಷ್ಟ ಚಿತ್ರಣ ಹೊರಬೀಳುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.