ಹಿರಿಯಡಕ: ಬಿಜೆಪಿ ಕಾಪು ಯುವ ಮೋರ್ಚಾ ಮತ್ತು ಹಿರಿಯಡಕ ಯುವ ಮೋರ್ಚಾ ಮಹಾಶಕ್ತಿ ಕೇಂದ್ರದ ವತಿಯಿಂದ ಪ್ರಧಾನಿ ನರೇಂದ್ರ ಮೋದಿ ಅವರ 70ನೇ ಜನುಮದಿನದ ಸೇವಾ ಸಪ್ತಾಹ ಕಾರ್ಯ ಕ್ರಮದ ಅಂಗವಾಗಿ ಬೃಹತ್ ರಕ್ತದಾನ ಶಿಬಿರ ಹಿರಿಯಡಕದ ದೇವಾಡಿಗರ ಸಭಾಭವನದಲ್ಲಿ ಇಂದು ನಡೆಯಿತು.
ಜಿಲ್ಲಾ ಬಿ.ಜೆ.ಪಿ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ರಕ್ತದಾನ ಶಿಬಿರದಲ್ಲಿ 70 ಯುನಿಟ್ ರಕ್ತ ಸಂಗ್ರಹಿಸಲಾಯಿತು.
ಈ ಸಂದರ್ಭದಲ್ಲಿ ಕಾಪು ಶಾಸಕ ಲಾಲಾಜಿ ಆರ್ ಮೆಂಡನ್, ಕಾಪು ಕ್ಷೇತ್ರ ಅಧ್ಯಕ್ಷ ಶ್ರೀಕಾಂತ್ ನಾಯಕ್, ಕ್ಷೇತ್ರ ಪ್ರಭಾರಿಗಳಾದ ಯಶಪಾಲ್ ಸುವರ್ಣ, ಕರಾವಳಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರ್ ರತ್ನಾಕರ್ ಹೆಗ್ಡೆ, ಜಿಪಂ ಉಪಾಧ್ಯಕ್ಷೆ ಶೀಲಾ ಕೆ ಶೆಟ್ಟಿ, ನಿಕಟ ಪೂರ್ವ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಸುರೇಶ್ ಶೆಟ್ಟಿ ಗುರ್ಮೆ, ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ವಿಖ್ಯಾತ್ ಶೆಟ್ಟಿ, ರಾಜ್ಯ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ ಸುವರ್ಣ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಕುತ್ಯಾರ್ ನವೀನ್ ಶೆಟ್ಟಿ ಮತ್ತು ಸದಾನಂದ ಉಪ್ಪಿನ ಕುದ್ರು, ಕೋಶಾಧಿಕಾರಿ ಪ್ರವೀಣ್ ಶೆಟ್ಟಿ ಕಪ್ಪೆಟ್ಟು, ಕ್ಷೇತ್ರ ಪ್ರಧಾನ ಕಾರ್ಯದರ್ಶಿಗಳಾದ ಅನಿಲ್ ಶೆಟ್ಟಿ ಮತ್ತು ಗೋಪಾಲ್ ಕೃಷ್ಣ ರಾವ್.
ತಾಲೂಕು ಪಂಚಾಯತ್ ಅಧ್ಯಕ್ಷೆ ಸಂಧ್ಯಾ ಕಾಮತ್, ಜಿಪಂ ಸದಸ್ಯೆ ಗೀತಾಂಜಲಿ ಸುವರ್ಣ, ಕ್ಷೇತ್ರ ಮಹಿಳಾ ಮೋರ್ಚಾ ಅಧ್ಯಕ್ಷೆ ಸುಮಾ ಶೆಟ್ಟಿ, ಜಿಲ್ಲಾ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶರತ್ ಶೆಟ್ಟಿ ಉಪ್ಪುಂದ, ಕಾಪು ಕ್ಷೇತ್ರ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಕಿಶನ್ ಅಲೆವೂರ್, ಹಿರಿಯಡಕ ಯುವ ಮೋರ್ಚಾ ಮಹಾಶಕ್ತಿ ಕೇಂದ್ರ ಪ್ರಧಾನ ಕಾರ್ಯದರ್ಶಿ ರಾಘವೇಂದ್ರ, ಹಿರಿಯಡಕ ಮಹಾಶಕ್ತಿ ಅಧ್ಯಕ್ಷ ಸಂದೀಪ್ ಶೆಟ್ಟಿ ಉಪಸ್ಥಿತರಿದ್ದರು.
ಕ್ಷೇತ್ರದ ಯುವ ಮೋರ್ಚಾ ಅಧ್ಯಕ್ಷ ಸಚಿನ್ ಸುವರ್ಣ ಸ್ವಾಗತಿಸಿದರು. ಹಿರಿಯಡಕ ಯುವ ಮೋರ್ಚಾ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಶ್ರೀಪ್ರಸಾದ್ ನಾಯಕ್ ವಂದಿಸಿದರು. ಕಾಪು ಕ್ಷೇತ್ರ ಯುವ ಮೋರ್ಚಾ ಕಾರ್ಯದರ್ಶಿ ಪ್ರಸನ್ನ ಕಾಮತ್ ಕಾರ್ಯಕ್ರಮ ನಿರೂಪಿಸಿದರು.