ಬಡವರಿಗೆ ನವೆಂಬರ್ ವರೆಗೂ ಉಚಿತ ರೇಷನ್: ಪ್ರಧಾನಿ ಮೋದಿ ಘೋಷಣೆ

ನವದೆಹಲಿ: ಬಡವರಿಗೆ ಉಚಿತ ಪಡಿತರ ನೀಡುವ ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಯೋಜನೆಯನ್ನು ನವೆಂಬರ್ ಅಂತ್ಯದ​ವರೆಗೂ ವಿಸ್ತರಿಸಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಘೋಷಿಸಿದ್ದಾರೆ.
ಇಂದು ದೇಶವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ ಅವರು, ಕೊರೋನಾ ಲಾಕ್ ಡೌನ್ ನಿಂದಾಗಿ ದೇಶದಲ್ಲಿ ಬಡವರು ತೀವ್ರ ಸಂಕಷ್ಟಕ್ಕೆ ಸಿಲುಕಿರುವುದರಿಂದ ಗರೀಬ್ ಕಲ್ಯಾಣ್ ಯೋಜನೆಯನ್ನು ಜುಲೈ, ಆಗಸ್ಟ್, ಸೆಪ್ಟೆಂಬರ್, ಅಕ್ಟೋಬರ್ ಮತ್ತು ನವೆಂಬರ್ ತಿಂಗಳಲ್ಲೂ ಮುಂದುವರಿಸಲಾಗುವುದು ಎಂದಿದ್ದಾರೆ.
ಕರೊನಾ ವಿರುದ್ಧ ನಾವು ಹೋರಾಡುತ್ತಲೇ ಅನ್​ಲಾಕ್​ ಎರಡನೇ ಹಂತಕ್ಕೆ ಪ್ರವೇಶಿಸುತ್ತಿದ್ದೇವೆ. ಬೇರೆ ದೇಶಗಳಿಗೆ ಹೋಲಿಸಿದರೆ, ಭಾರತದ ಸ್ಥಿತಿ ಉತ್ತಮವಾಗಿದೆ. ಪಿಎಂ ಗರಿಬ್ ಆನ್ನ ಯೋಜನೆ ನವೆಂಬರ್ ಅಂತ್ಯದವರೆಗೆ ವಿಸ್ತರಿಸಲು ನಾವು ನಿರ್ಧರಿಸಿದ್ದೇವೆ 80 ಕೋಟಿ ಜನರಿಗೆ ಪ್ರಯೋಜನಗಳನ್ನು ನೀಡುವ ಈ ಯೋಜನೆ ನವೆಂಬರ್ ವರೆಗೆ ಮುಂದುವರಿಯುತ್ತದೆ ಅಂತ ಹೇಳಿದರು.
ಪ್ರತಿ ಕುಟುಂಬಕ್ಕೆ 5 ಅಕ್ಕಿ ಮತ್ತು ಗೋಧಿ 1 ಕೆಜಿ ಸಕ್ಕರೆ 1 ಕೆಜಿ ಬೇಳೆ ವಿತರಿಸಲಾಗುವುದು ಎಂದರು. ಲಾಕ್​ಡೌನ್​ ಬೆನ್ನಲ್ಲೇ ಗರೀಬ್​ ಕಲ್ಯಾಣ ಯೋಜನೆ ಜಾರಿಗೊಳಿಸಲಾಯಿತು ಎಂದರು.