ಅಪ್ಪು ಗಂಧದಗುಡಿಗೆ ಶುಭ ಹಾರೈಸಿದ ಪ್ರಧಾನಿ ಮೋದಿ

ಅಪ್ಪು ಜಗತ್ತಿನಾದ್ಯಂತ ಲಕ್ಷಾಂತರ ಹೃದಯಗಳಲ್ಲಿ ನೆಲೆಸಿದ್ದಾರೆ. ಅವರು ತೇಜಸ್ಸಿನ ಪ್ರತೀಕ, ಚೈತನ್ಯದ ಚಿಲುಮೆ ಮತ್ತು ಸರಿಸಾಟಿಯಿಲ್ಲದ ಪ್ರತಿಭಾವಂತರಾಗಿದ್ದರು. ‘ಗಂಧದ ಗುಡಿ’ ಪ್ರಕೃತಿ ಮಾತೆಗೆ, ಕರ್ನಾಟಕದ ನೈಸರ್ಗಿಕ ಸೌಂದರ್ಯ ಹಾಗು ಪರಿಸರ ಸಂರಕ್ಷಣೆಗೆ ಸಲ್ಲಿಸಲಾದ ಗೌರವ. ಈ ಪ್ರಯತ್ನಕ್ಕೆ ನನ್ನ ಶುಭ ಹಾರೈಕೆಗಳು ಎಂದು ಪ್ರಧಾನಿ ಮೋದಿ ಟ್ವೀಟಿಸಿದ್ದಾರೆ.

ಅಶ್ವಿನಿ ಪುನೀತ್ ರಾಜ್ ಕುಮಾರ್ ಗಂಧದ ಗುಡಿ ಚಿತ್ರ ಬಿಡುಗಡೆ ಬಗ್ಗೆ ಪ್ರಧಾನಿ ಮೋದಿ ಅವರನ್ನು ಟ್ಯಾಗ್ ಮಾಡಿ ಟ್ವೀಟಿಸಿದ್ದರು. ನಮಸ್ತೆ ನರೇಂದ್ರ ಮೋದಿ ಅವರೇ, ಅಪ್ಪು ಅವರ ಹೃದಯಕ್ಕೆ ಹತ್ತಿರವಾದ ಪ್ರಾಜೆಕ್ಟ್ ‘ಗಂಧದ ಗುಡಿ’ ಚಿತ್ರದ ಟ್ರೈಲರ್ ಬಿಡುಗಡೆ ಮಾಡುತ್ತಿರುವ ನಮಗೆ ಇಂದು ಭಾವನಾತ್ಮಕ ದಿನ. ಅಪ್ಪು ಯಾವಾಗಲೂ ನಿಮ್ಮೊಂದಿಗಿನ ಸಂವಾದಗಳನ್ನು ಪಾಲಿಸುತ್ತಿದ್ದರು ಮತ್ತು ನಿಮ್ಮೊಂದಿಗೆ ವೈಯಕ್ತಿಕವಾಗಿ ಇದನ್ನು ಹಂಚಿಕೊಳ್ಳಲು ಇಷ್ಟಪಡುತ್ತಿದ್ದರು ಎಂದು ಅಶ್ವಿನಿ ಟ್ವೀಟ್ ಮಾಡಿದ್ದರು.

ಇದಕ್ಕೆ ಪ್ರತಿಕ್ರಿಯಿಸಿರುವ ಪ್ರಧಾನಿ ಮೋದಿ ಕನ್ನಡದಲ್ಲಿ ಟ್ವೀಟ್ ಮಾಡಿ ಶುಭಹಾರೈಸಿದ್ದಾರೆ.