ಕನ್ನಡ ರಾಜ್ಯೋತ್ಸವದಂದು ರಾಜ್ಯದ ಜನತೆಗೆ ಶುಭ ಕೋರಿದ ಪ್ರಧಾನಿ ಮೋದಿ

ನವದೆಹಲಿ: ರಾಜ್ಯವು ಇಂದು 67 ನೇ ರಾಜ್ಯೋತ್ಸವವನ್ನು ಆಚರಿಸುತ್ತಿದ್ದು, ಈ ಸಂದರ್ಭದಲ್ಲಿ ಪ್ರಧಾನಿ ಮೋದಿ ರಾಜ್ಯದ ಜನತೆಗೆ ಶುಭಾಶಯ ಕೋರಿದ್ದಾರೆ.

ಸಾಮಾಜಿಕ ಜಾಲತಾಣ X ನಲ್ಲಿ “ಈ ಕನ್ನಡ ರಾಜ್ಯೋತ್ಸವದಂದು ನಾವು ಕರ್ನಾಟಕದ ಚೈತನ್ಯವನ್ನು ಸಂಭ್ರಮಿಸುತ್ತಿದ್ದೇವೆ. ಪ್ರಾಚೀನ ಆವಿಷ್ಕಾರ ಮತ್ತು ಆಧುನಿಕ ಉದ್ಯಮದ ತೊಟ್ಟಿಲು ಕರ್ನಾಟಕ. ಪ್ರೀತಿ ಮತ್ತು ಬುದ್ಧಿವಂತಿಕೆ ಎರಡರ ಮಿಳಿತವಾಗಿರುವ ಕನ್ನಡಿಗರು, ಕರ್ನಾಟಕ ರಾಜ್ಯವು ಶ್ರೇಷ್ಠತೆಯ ಕಡೆಗೆ ಸತತ ಮುನ್ನಡೆಯುವಂತೆ ಉತ್ತೇಜಿಸುತ್ತಿದ್ದಾರೆ. ಕರ್ನಾಟಕ ಮತ್ತಷ್ಟು ಪ್ರವರ್ಧಮಾನಕ್ಕೆ ಬರಲಿ, ಇನ್ನಷ್ಟು ನಾವೀನ್ಯತೆಯೊಂದಿಗೆ ಎಲ್ಲರಿಗೂ ಸ್ಫೂರ್ತಿಯಾಗಲಿ” ಎಂದು ಬರೆದಿದ್ದಾರೆ.

ದೇಶಾದ್ಯಂತದ ಗಣ್ಯರು ಕನ್ನಡ ರಾಜ್ಯೋತ್ಸವಕ್ಕೆ ಶುಭಾಶಯಗಳನ್ನು ಸಲ್ಲಿಸುತ್ತಿದ್ದಾರೆ.