ನವದೆಹಲಿ: ದೇಶದಲ್ಲಿ ಕೊರೊನಾ ಎರಡನೇ ಅಲೆ ತೀವ್ರಗೊಂಡಿದ್ದು, ಈಗಾಗಲೇ ಕೆಲವು ರಾಜ್ಯಗಳು ಲಾಕ್ ಡೌನ್ ಘೋಷಿಸಿವೆ. ಈ ನಡುವೇ ದೇಶಾದ್ಯಂತ ಲಾಕ್ ಡೌನ್ ಹೇರಬೇಕೆಂಬ ಅಭಿಪ್ರಾಯವೂ ಬಲವಾಗುತ್ತಿದೆ. ಈ ನಡುವೆ ಪ್ರಧಾನಿ ನರೇಂದ್ರ ಮೋದಿ ಅವರು ಇಂದು 8.45ಕ್ಕೆ ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದು, ಇದು ಬಹಳಷ್ಟು ಕುತೂಹಲಕ್ಕೆ ಎಡೆಮಾಡಿಕೊಟ್ಟಿದೆ.