udupixpress
Home Trending ಪ್ರಧಾನಿ ಮೋದಿ ಜನ್ಮದಿನ; ಕಾರ್ಕಳ ಬಿಜೆಪಿ ಯುವಮೋರ್ಚಾ ವತಿಯಿಂದ ರಕ್ತದಾನ ಶಿಬಿರ

ಪ್ರಧಾನಿ ಮೋದಿ ಜನ್ಮದಿನ; ಕಾರ್ಕಳ ಬಿಜೆಪಿ ಯುವಮೋರ್ಚಾ ವತಿಯಿಂದ ರಕ್ತದಾನ ಶಿಬಿರ

ಕಾರ್ಕಳ: ಬಿಜೆಪಿ ಯುವ ಮೋರ್ಚಾ ಕಾರ್ಕಳದ ವತಿಯಿಂದ ದೇಶದ ಪ್ರಧಾನಿ ನರೇಂದ್ರ ಮೋದಿಯವರ ಎಪ್ಪತ್ತನೇ ಜನ್ಮದಿನದ ಅಂಗವಾಗಿ ಕಾರ್ಕಳದಲ್ಲಿ ಇಂದು ರಕ್ತದಾನ ಶಿಬಿರ ಕಾರ್ಯಕ್ರಮವನ್ನು ಆಯೋಜಿಸಲಾಯಿತು.

ಬಿಜೆಪಿ ಹಿರಿಯ ಮುಖಂಡ ಎಂ.ಕೆ. ವಿಜಯ್ ಕುಮಾರ್ ಶಿಬಿರವನ್ನು ಉದ್ಘಾಟಿಸಿದರು.‌ ಕಾರ್ಕಳ ಬಿಜೆಪಿ ಅಧ್ಯಕ್ಷ ಮಹಾವೀರ ಹೆಗಡೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಕಾರ್ಯಕ್ರಮದಲ್ಲಿ ಬಿಜೆಪಿ ಉಡುಪಿ ಜಿಲ್ಲಾ ಉಪಾಧ್ಯಕ್ಷ ಮನಿರಾಜ್ ಶೆಟ್ಟಿ, ಕಾರ್ಯದರ್ಶಿ  ರೇಷ್ಮಾಉದಯ್ ಶೆಟ್ಟಿ, ತಾಲೂಕು ಪ್ರಧಾನ ಕಾರ್ಯದರ್ಶಿ ಜಯರಾಮ್ ಸಾಲಿಯನ್  ಮತ್ತು ನವೀನ್ ನಾಯಕ್, ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ವಿಖ್ಯಾತ್ ಶೆಟ್ಟಿ ಕಾರ್ಕಳ, ಯುವ ಮೋರ್ಚಾ ಅಧ್ಯಕ್ಷ ಸುಹಾಸ್ ಶೆಟ್ಟಿ ಪ್ರಧಾನ ಕಾರ್ಯದರ್ಶಿ ಯೋಗೀಶ್ ಸಾಲಿಯಾನ್ ಉಪಸ್ಥಿತರಿದ್ದರು.

error: Content is protected !!