ಉಡುಪಿ: ಭಾರತವನ್ನು ವಿಶ್ವಗುರುವಾಗಿಸುವ ಪಣತೊಟ್ಟು ಹಗಲಿರುಳು ಶ್ರಮಿಸುತ್ತಾ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಶಕ್ತಿ ತುಂಬುವ ನರೇಂದ್ರ ಮೋದಿಯವರ ಕಾರ್ಯವೈಖರಿ ಎಲ್ಲರಿಗೂ ಆದರ್ಶ ಎಂದು ಶಾಸಕ ಯಶ್ಪಾಲ್ ಸುವರ್ಣ ಹೇಳಿದರು.
ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬದ ಅಂಗವಾಗಿ ತಮ್ಮ ಕಚೇರಿಯಲ್ಲಿ ನಗರದ ವಿವಿಧ ರುದ್ರಭೂಮಿಯಲ್ಲಿ ಸೇವೆ ಸಲ್ಲಿಸುತ್ತಿರುವ ಸೇವಕರನ್ನು ಸನ್ಮಾನಿಸಿ ಅವರು ಮಾತನಾಡಿದರು.
ಮುಖ್ಯ ಅತಿಥಿಗಳಾಗಿ ಸಮಾಜ ಸೇವಕ ವಿಶು ಶೆಟ್ಟಿ ಅಂಬಲಪಾಡಿ, ನಿತ್ಯಾನಂದ ಒಳಕಾಡು ಹಾಗೂ ನಗರಸಭೆ ಮಾಜಿ ಆಧ್ಯಕ್ಷ ಕಿರಣ್ ಕುಮಾರ್ ಉಪಸ್ಥಿತರಿದ್ದರು.












