ಟೀಮ್ ಮೋದಿ ಕಾಪು ವಲಯದ ವತಿಯಿಂದ ಬಿಜೆಪಿ ಮುಖಂಡ ಯಶ್ ಪಾಲ್ ಸುವರ್ಣ ರವರ ನೇತೃತ್ವದಲ್ಲಿ ಪ್ರಧಾನಿ ಶ್ರೀ ನರೇಂದ್ರ ಮೋದಿ ಹಾಗೂ ಹಿಂದೂ ಕಾರ್ಯಕರ್ತರ ಶ್ರೇಯೋಭಿವೃದ್ಧಿಯೊಂದಿಗೆ ಲೋಕ ಕಲ್ಯಾಣಾರ್ಥದ ಸಂಕಲ್ಪದೊಂದಿಗೆ ಆಯೋಜಿಸಿದ್ದ ಮಹಾರುದ್ರ ಯಾಗ ಮಡುಂಬು ಮಹಾಗಣಪತಿ ದೇವಸ್ಥಾನದಲ್ಲಿ ಸಂಪನ್ನಗೊಂಡಿತು.
ಜ್ಯೋತಿರ್ವಿದ್ವಾನ್ ಪ್ರಕಾಶ್ ಅಮ್ಮಣ್ಣಾಯ ರವರ ಮಾರ್ಗದರ್ಶನದಲ್ಲಿ, ಪುರೋಹಿತರಾದ ಶ್ರೀವತ್ಸ ಭಟ್ ಹಾಗೂ ಶ್ರೀ ಜನಾರ್ಧನ ತಂತ್ರಿ ನೇತೃತ್ವದಲ್ಲಿ ನಡೆದ ಮಹಾರುದ್ರ ಯಾಗದಲ್ಲಿ ಯಶ್ ಪಾಲ್ ಸುವರ್ಣ ಭಾಗಿಯಾದರು.
ಈ ಸಂದರ್ಭದಲ್ಲಿ ಮಾತನಾಡಿದ ಯಶ್ ಪಾಲ್ ಸುವರ್ಣ ಭಾರತದ ಪ್ರಧಾನಿಯಾಗಿ ದೇಶವನ್ನು ಸಮರ್ಥವಾಗಿ ಮುನ್ನಡೆಸುತ್ತಿರುವ ಹೆಮ್ಮೆಯ ಪ್ರಧಾನಿ ಶ್ರೀ ನರೇಂದ್ರ ಮೋದಿಯವರಿಗೆ ದೀರ್ಘಾಯುಷ್ಯ, ಉತ್ತಮ ಆರೋಗ್ಯ ಸಹಿತ ಇನ್ನಷ್ಟು ಕಾಲ ದೇಶ ಮುನ್ನಡೆಸುವಂತಾಗಲಿ ಹಾಗೂ ಸಮಸ್ತ ಹಿಂದೂ ಕಾರ್ಯಕರ್ತರ ಶ್ರೇಯೋಭಿವೃದ್ಧಿಯೊಂದಿಗೆ ಲೋಕ ಕಲ್ಯಾಣಾರ್ಥವಾಗಿ ಯಾಗವನ್ನು ನಡೆಸಲಾಗಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ ಶ್ರೀಕಾಂತ ನಾಯಕ್ ಅಲೆವೂರು, ಶ್ರೀಮತಿ ನಯನ ಗಣೇಶ್, ಶ್ರೀ ಸುರೇಶ್ ಶೆಟ್ಟಿ ಗುರ್ಮೆ, ಶ್ರೀಮತಿ ಕೇಸರಿ ಯುವರಾಜ್, ಶ್ರೀಮತಿ ಮಾಲಿನಿ ಶೆಟ್ಟಿ, ಶ್ರೀಮತಿ ಸುಮಾ ಶೆಟ್ಟಿ, ಶ್ರೀಮತಿ ಮಂಜುಳಾ ಪ್ರಸಾದ್, ಟೀಮ್ ಮೋದಿ ಕಾಪು ವಲಯದ ಪ್ರಮುಖರಾದ ಶ್ರೀ ಯೋಗೀಶ್ ಪೂಜಾರಿ, ಶ್ರೀ ಬಾಲಕೃಷ್ಣ ಕಾಪು, ಶ್ರೀ ಅಶ್ವಿನ್, ಶ್ರೀ ಲಕ್ಷ್ಮೀಕಾಂತ್, ಶ್ರೀ ಸುವಿತ್, ಶ್ರೀ ನಾಗೇಶ್ ಮೊದಲಾದವರು ಉಪಸ್ಥಿತರಿದ್ದರು.












