ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಚುನಾಯಿತ ಜನಪ್ರತಿನಿಧಿಯಾಗಿ 20 ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿದ್ದಾರೆ.
ಒಮ್ಮೆಯೂ ಸೋಲು ಕಾಣದೇ ಯಶಸ್ವಿ ಚುನಾಯಿತ ಪ್ರತಿನಿಧಿಯಾಗಿ ಮುಖ್ಯಮಂತ್ರಿಯಾಗಿ, ಪ್ರಧಾನ ಮಂತ್ರಿಯಂತಹ ಉನ್ನತ ಹುದ್ದೆಗಳಲ್ಲಿ ಅವರು ಮುನ್ನಡೆಯುತ್ತಿದ್ದಾರೆ.
ಗುಜರಾತ್ ಮುಖ್ಯಮಂತ್ರಿಯಾಗಿರಲಿ ಅಥವಾ ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರದ ಪ್ರಧಾನಿಯಾಗಿರಲಿ, ಮೋದಿ ಅವರು ಸದಾ ಜನರ ಕಲ್ಯಾಣಕ್ಕಾಗಿ ದುಡಿಯುತ್ತಿದ್ದಾರೆ ಎಂದು ಬಿಜೆಪಿ ಶ್ಲಾಘಿಸಿದೆ.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು, ‘ಅಕ್ಟೋಬರ್ 7, 2001ರಲ್ಲಿ ಮೋದಿ ಅವರು ಗುಜರಾತ್ ಮುಖ್ಯಮಂತ್ರಿಯಾಗಿ ಮೊದಲ ಬಾರಿಗೆ ಅಧಿಕಾರವಹಿಸಿಕೊಂಡಿದ್ದು, ಭಾರತೀಯ ರಾಜಕೀಯ ಇತಿಹಾಸದಲ್ಲೇ ಒಂದು ಮೈಲಿಗಲ್ಲು‘ ಎಂದು ಬಣ್ಣಿಸಿದ್ದಾರೆ.
ಗುಜರಾತ್ ಮುಖ್ಯಮಂತ್ರಿಯಾಗಿ ಹಾಗೂ ದೇಶದ ಪ್ರಧಾನಿಯಾಗಿ ನರೇಂದ್ರಮೋದಿಯವರು 6941 ಯಶಸ್ವೀ ದಿನಗಳನ್ನು ಪೂರೈಸಿದ್ದಾರೆ. ತನ್ನ ಬಗ್ಗೆ ಯೋಚಿಸದೇ, ಸಾರ್ವಜನಿಕರ ಕಲ್ಯಾಣಕ್ಕಾಗಿ ದುಡಿದಿರುವ ಮೋದಿ ಅವರು, ತಮ್ಮ ಆಡಳಿತಾವಧಿಯಲ್ಲಿ ಯಾವುದೇ ಆರೋಪಗಳನ್ನು ಎದುರಿಸಿದ್ದನ್ನು ನಾನು ಕಾಣಲಿಲ್ಲ‘ ಎಂದು ಪಕ್ಷದ ವಕ್ತಾರ ಸುಧಾಂಶು ತ್ರಿವೇದಿ ಟ್ವೀಟ್ ಮಾಡಿದ್ದಾರೆ.