ಪ್ರಧಾನಮಂತ್ರಿ ಮತ್ಸ್ಯಸಂಪದ ಯೋಜನೆ: ಅರ್ಜಿ ಆಹ್ವಾನ

ಉಡುಪಿ: ಮೀನುಗಾರಿಕೆ ಇಲಾಖೆಯ ವತಿಯಿಂದ ಕೇಂದ್ರ ಪುರಸ್ಕೃತ ಪ್ರಧಾನ ಮಂತ್ರಿ ಮತ್ಸ್ಯಸಂಪದ ಯೋಜನೆಯಡಿ ಫಲಾನುಭವಿ ಆಧಾರಿತ ಯೋಜನೆಗಳನ್ನು ಅನುಷ್ಠಾನಗೊಳಿಸಲು ಘಟಕವಾರು ಮತ್ತು ವರ್ಗವಾರು ಗುರಿಗಳನ್ನು ನಿಗದಿಪಡಿಸಿದ್ದು, ಯೋಜನೆಯನ್ನು ಪಾರದರ್ಶಕವಾಗಿ ಅನುಷ್ಠಾನಗೊಳಿಸಲು ಜಿಲ್ಲೆಯ ಅರ್ಹ ಮೀನುಗಾರರಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ಅರ್ಜಿ ಸಲ್ಲಿಸಲು ಜೂನ್ 20 ಕೊನೆಯ ದಿನ.

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಉಡುಪಿ, ಕುಂದಾಪುರ ಹಾಗೂ ಕಾರ್ಕಳ ತಾಲೂಕು ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿ ಅಥವಾ ಮೀನುಗಾರಿಕೆ ಇಲಾಖೆಯ ಉಪನಿರ್ದೇಶಕರ ಕಚೇರಿಯನ್ನು ಕಛೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಇಲಾಖೆಯ ಕಚೇರಿ ಪ್ರಕಟಣೆ ತಿಳಿಸಿದೆ.