ಉಡುಪಿ: ಗಡಿ ಜಿಲ್ಲೆಯಾದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಳೆಯಿಂದ (ಆ.7) ವೀಕೆಂಡ್ ಕರ್ಫ್ಯೂ ಜಾರಿಯಾದರೂ ಉಡುಪಿ-ಮಂಗಳೂರು ಸರ್ಕಾರಿ ಹಾಗೂ ಖಾಸಗಿ ಬಸ್ ಸಂಚಾರ ಎಂದಿನಂತೆ ಇರಲಿದೆ.
ಉಡುಪಿ-ಮಂಗಳೂರು ಮಧ್ಯೆ ಖಾಸಗಿ ಬಸ್ ಸಂಚಾರ ಎಂದಿನಂತೆ ಇರಲಿದೆ. ಎಂದಿನಂತೆ ಬಸ್ ಸಂಚರಿಸಲು ಜಿಲ್ಲಾಧಿಕಾರಿಗಳು ಅನುಮತಿ ನೀಡಿದ್ದಾರೆ ಎಂದು
ಕೆನರಾ ಬಸ್ಸು ಮಾಲಕರ ಸಂಘದ ಅಧ್ಯಕ್ಷ ಕೆ ರಾಜವರ್ಮ ಬಲ್ಲಾಳ್ ತಿಳಿಸಿದ್ದಾರೆ.