ಉಡುಪಿ: ಜಿಲ್ಲೆಯ 25 ನೇ ರಜತ ಮಹೋತ್ಸವದ ಪ್ರಯುಕ್ತ ಗುರುವಾರದಂದು ಬೋರ್ಡ್ ಹೈಸ್ಕೂಲ್‌ನಿಂದ ಅಜ್ಜರಕಾಡು ಮಹಾತ್ಮಾಗಾಂಧಿ ಜಿಲ್ಲಾ ಕ್ರೀಡಾಂಗಣದವರೆಗೆ ನಡೆದ ಮೆರವಣಿಗೆಗೆ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ, ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನಿಲ್ ಕುಮಾರ್, ಶಾಸಕರಾದ ಕೆ.ರಘುಪತಿ ಭಟ್, ಲಾಲಾಜಿ.ಆರ್.ಮೆಂಡನ್, ವಿವಿಧ ಸಂಘ-ಸಂಸ್ಥೆಗಳು, ವಿದ್ಯಾರ್ಥಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.












