ಉಡುಪಿ: ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನ ಗಣಕಯಂತ್ರ ಶಿಕ್ಷಣ ಪರೀಕ್ಷೆಯು ಆಗಸ್ಟ್ 1 ರಿಂದ 8 ರ ವರೆಗೆ ನಗರದ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ (ಡಯಟ್) ಯಲ್ಲಿ ನಡೆಯಲಿದ್ದು, ಪರೀಕ್ಷೆಗಳು ಮುಕ್ತಾಯವಾಗುವವರೆಗೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ, ಶಿಸ್ತು ಮತ್ತು ಶಾಂತಿಯನ್ನು ಕಾಪಾಡುವ ಸಲುವಾಗಿ, ಪರೀಕ್ಷೆಗಳು ಸುಸೂತ್ರವಾಗಿ ಮತ್ತು ದೋಷ ರಹಿತವಾಗಿ ನಡೆಸಲು ಮತ್ತು ನಡೆಯಬಹುದಾದ ಎಲ್ಲಾ ರೀತಿಯ ಅವ್ಯವಹಾರಗಳನ್ನು ತಡೆಗಟ್ಟಲು ನಿಗದಿಪಡಿಸಿದ ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀ. ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ, 144(1) ರಂತೆ ನಿಷೇಧಾಜ್ಞೆ ಜಾರಿಗೊಳಿಸಿ, ಜಿಲ್ಲಾ ದಂಡಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಆದೇಶಿಸಿರುತ್ತಾರೆ.