ಉಡುಪಿ: ರಾಜ್ಯ ಕಾಂಗ್ರೆಸ್ ಸರಕಾರ ಹಿಂದೂ ವಿರೋಧಿ ನೀತಿ ಅನುಸರಿಸುತ್ತಿದೆ. ಅಲ್ಪಸಂಖ್ಯಾತರನ್ನು ಒಲೈಸುವ ರಾಜಕಾರಣ ಮಾಡುತ್ತಿದೆ. ಡಿಜೆ ಹಳ್ಳಿ, ಕೆಜೆ ಹಳ್ಳಿ ಪ್ರಕರಣದ ಆರೋಪಿಗಳ ಮೇಲಿನ ಕೇಸ್ ಗಳನ್ನು ಹಿಂಪಡೆಯುತ್ತಿರುವ ಸರಕಾರ ಹಿಂದೂ ಕಾರ್ಯಕರ್ತರನ್ನು ಬಂಧಿಸುವುದು ಅವರ ಮೇಲೆ ವಿನಾ ಕಾರಣ ಕೇಸ್ ದಾಖಲಿಸುವುದು ಮುಂತಾದವುಗಳನ್ನು ಮಾಡುತ್ತಿದೆ. ಮಾತ್ರವಲ್ಲ ಹಿಂದೂ ಸಂಘಟನೆಯ ಕೆಲಸಗಳಿಗೆ ತೊಂದರೆ ನೀಡುತ್ತಿದ್ದು ಸಿದ್ದರಾಮಯ್ಯ ಸರಕಾರ ಹಿಂದೂ ಕಾರ್ಯಕರ್ತರನ್ನು ದಮನಿಸುವ ಕೆಲಸ ಮಾಡುತ್ತಿದೆ.
ಹಿಂದೂ ಕಾರ್ಯಕರ್ತರ ಮೇಲೆ ಇದೇ ರೀತಿ ದೌರ್ಜನ್ಯ ಮುಂದುವರಿದೆ ಕಾಂಗ್ರೆಸ್ ಸರಕಾರದ ವಿರುದ್ಧ ರಾಜ್ಯಾದ್ಯಂತ ಉಗ್ರ ಹೋರಾಟ ಮಾಡುತ್ತೇವೆ ಎಂದು ಹಿಂಜಾವೇ ಮುಖಂಡ ರಿಕೇಶ್ ಪಾಲನ್ ಎಚ್ಚರಿಕೆ ನೀಡಿದರು.
ಅವರು ಸೋಮವಾರದಂದು ಹಿಂದು ಜಾಗರಣ ವೇದಿಕೆಯ ಮುಖಂಡ ಸತೀಶ್ ದಾವಣಗೆರೆ ಅವರ ಬಂಧನ ಖಂಡಿಸಿ ಉಡುಪಿ ಹಿಂದು ಜಾಗರಣ ವೇದಿಕೆಯ ವತಿಯಿಂದ ಅಜ್ಜರಕಾಡು ಹುತಾತ್ಮರ ಸ್ಮಾರಕರದ ಮುಂಭಾಗದಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದರು.
ಹಿಂಜಾವೇ ಮುಖಂಡ ಶ್ರೀಕಾಂತ್ ಶೆಟ್ಟಿ ಕಾರ್ಕಳ, ಗುರುಪ್ರಸಾದ್ ಸೂಡ, ಶಂಕರ್ ದೇವಾಡಿಗ ಕೋಟ ಮತ್ತಿತರರು ಉಪಸ್ಥಿತರಿದ್ದರು.