ಸಾರ್ವಜನಿಕ ಶಿಕ್ಷಣ ಇಲಾಖೆ ಶಿಕ್ಷಕರಿಂದ ಪ್ರತಿಭಟನೆ

ಬೆಂಗಳೂರು: ಸಾರ್ವಜನಿಕ ಶಿಕ್ಷಣ ಇಲಾಖೆ ಕೌನ್ಸೆಲಿಂಗ್ ದಿಢೀರ್ ಸ್ಥಗಿತಗೊಳಿಸಿದ್ದರಿಂದ ನೂರಾರು ಶಿಕ್ಷಕರು ಪ್ರತಿಭಟನೆ ನಡೆಸಿದ್ದಾರೆ.

ತಾಂತ್ರಿಕ ಸಮಸ್ಯೆಯ ಕಾರಣ ನೀಡಿ ದಿಢೀರನೆ ವರ್ಗಾವಣೆ ಪ್ರಕ್ರಿಯೆ ರದ್ದುಗೊಳಿಸಿರುವುದಕ್ಕೆ ಶಿಕ್ಷಕ ಸಮುದಾಯ ಆಕ್ರೋಶ ವ್ಯಕ್ತಪಡಿಸಿದೆ.

ಸುಮಾರು ಒಂದು ತಿಂಗಳಿನಿಂದ ಸ್ಥಗಿತವಾಗಿದ್ದ ವರ್ಗಾವಣೆ ಪ್ರಕ್ರಿಯೆ ಕಳೆದ ವಾರ ಆರಂಭವಾಗಿತ್ತು. ಮತ್ತೆ ತಾಂತ್ರಿಕ ಸಮಸ್ಯೆ ಕಾರಣ ನೀಡಿ ಕೌನ್ಸೆಲಿಂಗ್ ಸ್ಥಗಿತಗೊಳಿಸಲಾಗಿದ್ದು, ಶಿಕ್ಷಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ತಾಂತ್ರಿಕ ದೋಷದ ಕಾರಣ ವರ್ಗಾವಣೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಶೀಘ್ರವೇ ಪರಿಷ್ಕೃತ ವೇಳಾಪಟ್ಟಿ ಬಿಡುಗಡೆ ಮಾಡಲಾಗುವುದು ಎಂದು ಸರಕಾರ ಇಂದು ತಿಳಿಸಿದೆ.