ಮಣಿಪಾಲ: ಜಿಲ್ಲೆಗೊಂದು ಸರಕಾರಿ ಮೆಡಿಕಲ್ ಕಾಲೇಜು ಬೇಕು ಎಂಬುದು ಬಹುದಿನಗಳ ಬೇಡಿಕೆ. ಈ ನಿಟ್ಟಿನಲ್ಲಿ ಕರಾವಳಿ ಯೂತ್ ಕ್ಲಬ್ ಖ್ಯಾತ ಮನೋವೈದ್ಯ ಡಾ. ಪಿ.ವಿ ಭಂಡಾರಿ ಅವರ ನೇತೃತ್ವದಲ್ಲಿ ಹೋರಾಟ ನಡೆಸುತ್ತಿದೆ.
ಇವತ್ತು ಜಿಲ್ಲೆಗೆ ಆಗಮಿಸಿದ ಮುಖ್ಯಮಂತ್ರಿಗಳನ್ನು ಭೇಟಿಯಾದ ಡಾ. ಪಿ ವಿ ಭಂಡಾರಿ ನೇತೃತ್ವದ ತಂಡವು ಮುಖ್ಯಮಂತ್ರಿಗಳನ್ನು ಭೇಟಿಯಾಗಿ ಜಿಲ್ಲೆಗೆ ಸರಕಾರಿ ಮೆಡಿಕಲ್ ಕಾಲೇಜ್ ಘೋಷಣೆ ಮಾಡುವಂತೆ ಮನವಿ ಮಾಡಿದರು.
ಮನವಿ ಸ್ವೀಕರಿಸಿದ ಮುಖ್ಯಮಂತ್ರಿಗಳು ಪಿಪಿಪಿ ಮಾದರಿಯ ಮೆಡಿಕಲ್ ಕಾಲೇಜಿಗೆ ಒಲವು ತೋರಿದ್ದಾರೆ.
ಸರಕಾರಿ ಮೆಡಿಕಲ್ ಕಾಲೇಜಿಗೆ ಸಾಕಷ್ಟು ಹಣ ಬೇಕಾಗುತ್ತದೆ ಎಂದು ಮುಖ್ಯಮಂತ್ರಿಗಳು ನಿಯೋಗಕ್ಕೆ ತಿಳಿಸಿದರು.












